ಭಟ್ಕಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸ ಹಿ ಪ್ರಾ ಶಾಲೆ ಮುಠ್ಠಳ್ಳಿ ಮತ್ತು ಸಾವಿತ್ರಿ ಸ್ಪೆಷಾಲಿಟಿ ಡೆಂಟಲ್ ಕೇರ್ ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ಮಕ್ಕಳಿಗಾಗಿ ಉಚಿತ ದಂತ ತಪಾಸಣಾ ಶಿಬಿರ
ನಡೆಯಿತು.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ಈ ಸಂದರ್ಭದಲ್ಲಿ ದಂತ ವೈದ್ಯ ರವಿ ನಾಯ್ಕ ಮಾತನಾಡಿ, ಶಿಬಿರದ ಉದ್ದೇಶದ ಬಗ್ಗೆ ವಿವರಿಸಿದರು. ಈಗಿನ ಜೀವನ ಶೈಲಿ ಬದಲಾವಣೆಯಿಂದ ಮಕ್ಕಳು ಸಿಹಿತಿನಿಸುಗಳು, ಬೇಕರಿ ತಿನಿಸು ಮುಂತಾದ ಜಂಕ್ ಫುಡ್‌ಗಳನ್ನು ಹೆಚ್ಚಾಗಿ ಸೇವಿಸುತ್ತಿರುವುದರಿಂದ ಬೇಗ ಹಲ್ಲುಗಳು ಹಾಳಾಗುತ್ತಿವೆ. ಈ ಶಿಬಿರದ ಮೂಲಕ ಮಕ್ಕಳಿಗೆ ಹಲ್ಲಿನ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ. ಬೆಳಗ್ಗೆ ಮತ್ತು ರಾತ್ರಿ ತಪ್ಪದೆ ಬ್ರಷ್ ಮಾಡಬೇಕು ಎಂದು ಪುಟ್ಟಮಕ್ಕಳಿಗೆ ಕಿವಿಮಾತು ಹೇಳಿದರು.

ಇದನ್ನೂ ಓದಿಗಂಭೀರವಾಗಿ ಗಾಯಗೊಂಡಿದ್ದ ಕೂಲಿ ಕಾರ್ಮಿಕ ಸಾವು

ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಹಲ್ಲಿನ ಆರೋಗ್ಯಕ್ಕೆ ಸಂಬಂಧಿಸಿದ ಪರಿಕರಗಳನ್ನು ಒಳಗೊಂಡ ಕಿಟಗಳನ್ನು ಏರೋಸ್ ಮೈಕ್ರೋ ಲ್ಯಾಬ್ ನ ವೈದ್ಯಕೀಯ ಪ್ರತಿನಿಧಿ ವಿತರಿಸಿದರು.
ಡಾ. ನಮೃತಾ ನಾಯ್ಕ ಹಲ್ಲುಗಳ ಸ್ವಚ್ಛತೆಯ ಕುರಿತು ಪ್ರಾತ್ಯಕ್ಷಿಕೆಯನ್ನು ಶಾಲಾ ಮಕ್ಕಳಿಗೆ ತೋರಿಸಿದರು.
ಡಾ. ಜಿತೇಶ್ ಮೊಗೇರ ವಿದ್ಯಾರ್ಥಿಗಳಿಗೆ ಹಲ್ಲಿನ ಆರೋಗ್ಯದ ಕುರಿತು ಮಾಹಿತಿ ನೀಡಿ, ದಂತ ತಪಾಸಣೆಯನ್ನು ನಡೆಸಿದರು.

ಇದನ್ನೂ ಓದಿ : ಶ್ರೀರಾಮ್ ಪೈನಾನ್ಸ್ ನಲ್ಲಿ ಹಣ ದುರುಪಯೋಗ ಪ್ರಕರಣ : ಪ್ರಮುಖ ಆರೋಪಿ ಸೆರೆ

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಏರೋಸ್ ಮೈಕ್ರೋ ಲ್ಯಾಬ್ ವೈದ್ಯರನ್ನು ಶಾಲೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಪಂಚಾಯತ್ ಅಧ್ಯಕ್ಷೆ ರಜನಿ ನಾಯ್ಕ, ಎಸ್ ಡಿ ಎಂ ಸಿ ಅಧ್ಯಕ್ಷ ಅನಂತ ನಾಯ್ಕ, ಪಂಚಾಯತ್ ಮಾಜಿ ಅಧ್ಯಕ್ಷ ಶೇಷಗಿರಿ ನಾಯ್ಕ್, ಸಿಆರ್ಪಿ ಜಯಶ್ರೀ ಆಚಾರಿ, ಶಾಲಾ ಮುಖ್ಯ ಉಪಾಧ್ಯಾಯಿನಿ ಗಂಗಾ ಮೊಗೇರ, ಎಸ್ಡಿಎಂಸಿ ಸದಸ್ಯರು, ಮಕ್ಕಳ  ಪಾಲಕರು, ಮುಂತಾದವರು ಉಪಸ್ಥಿತರಿದ್ದರು. ಶಿಕ್ಷಕ ವಿಜಯ ನಿರೂಪಿಸಿದರು.