ಯಲ್ಲಾಪುರ : ತಾಲೂಕಿನ ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಯಲ್ಲಿ ನೇತಾಜಿ ಸಮಾಜ ವಿಜ್ಞಾನ ಸಂಘ ಹಾಗೂ ಮತದಾರರ ಸಾಕ್ಷರತಾ ಕ್ಲಬ್ ಅಡಿಯಲ್ಲಿ ಶಾಲಾ ಸಂಸತ್ ಚುನಾವಣೆ ನಡೆಸಲಾಯಿತು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ವಿದ್ಯಾರ್ಥಿಗಳಿಗೆ ಚುನಾವಣಾ ಪ್ರಕ್ರಿಯೆಯ ಅರಿವು ಮೂಡಿಸುವುದಕ್ಕಾಗಿ ಚುನಾವಣಾ ಅಧಿಸೂಚನೆ ಹೊರಡಿಸುವುದರೊಂದಿಗೆ ಪ್ರಾರಂಭವಾದ ಚುನಾವಣಾ ಪ್ರಕ್ರಿಯೆಯು ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆದುಕೊಳ್ಳುವಿಕೆ, ನಾಮಪತ್ರ ಪರಿಶೀಲನೆ, ಚುನಾವಣಾ ಪ್ರಚಾರ ಮುಂತಾದ ಎಲ್ಲಾ ಚುನಾವಣಾ ಪ್ರಕ್ರಿಯೆಗಳನ್ನು ಒಳಗೊಂಡಿತ್ತು. ವಿದ್ಯಾರ್ಥಿಗಳಲ್ಲಿ ಮತದಾನದ ಕುರಿತಾದ ಜಾಗೃತಿ ಮೂಡಿಸಲು ಹಾಗೂ ಚುನಾವಣೆಗಳ ಮಹತ್ವ ಹಾಗೂ ಚುನಾವಣಾ ಪ್ರಕ್ರಿಯೆಗಳ ಅರಿವು ಮೂಡಿಸಲು ಈ ಪ್ರಕ್ರಿಯೆ ಸಹಕಾರಿಯಾಯಿತು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಶಾಲಾ ಸಂಸತ್ ಚುನಾವಣೆಯಲ್ಲಿ ಸಂಭ್ರಮದಿಂದ ಪಾಲ್ಗೊಂಡಿದ್ದರು.
ಇದನ್ನೂ ಓದಿ : ವಿಶೇಷಚೇತನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ
ಸಮಾಜ ವಿಜ್ಞಾನ ಶಿಕ್ಷಕ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ನಡೆದ ಈ ಚುನಾವಣೆಯಲ್ಲಿ ಮುಖ್ಯಾಧ್ಯಾಪಕ ಪ್ರಸನ್ನ ಹೆಗಡೆ ಮುಖ್ಯ ಚುನಾವಣಾಧಿಕಾರಿಯಾಗಿ ಭಾಗವಹಿಸಿದ್ದರು. ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿ ಚುನಾವಣಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಿದರು. ಸಾರ್ವತ್ರಿಕ ಚುನಾವಣಾ ಮಾದರಿಯಲ್ಲಿ ನಡೆದ ಈ ಚುನಾವಣೆಯಲ್ಲಿ ವಿದ್ಯಾರ್ಥಿಗಳು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು.
ಇದನ್ನೂ ಓದಿ : ಡೆಂಗ್ಯೂ ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮ
ಪದಾಧಿಕಾರಿಗಳು :
ವಿದ್ಯಾರ್ಥಿನಿ ಪ್ರಣತಿ ಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿ, ಚೈತನ್ಯ ಕೃಷ್ಣ ಭಟ್ಟ ಕ್ರೀಡಾ ಮಂತ್ರಿಯಾಗಿ, ವೈಷ್ಣವಿ ವಿಶ್ವನಾಥ ಭಟ್ಟ ಸಾಂಸ್ಕೃತಿಕ ಮಂತ್ರಿಯಾಗಿ, ವಿನಯ ಭಂಡಾರಿ ಸ್ವಚ್ಚತಾ ಮಂತ್ರಿಯಾಗಿ, ಸುಮಂತ ಸತೀಶ ಭಟ್ಟ ಪ್ರಾರ್ಥನಾ ಮಂತ್ರಿಯಾಗಿ ಹಾಗೂ ಅಕ್ಷಯ ನಾಗರಾಜ ನಾಯ್ಕ ಅಕ್ಷರ ದಾಸೋಹ ಮಂತ್ರಿಯಾಗಿ ಆಯ್ಕೆಯಾದರು.