ಶಿವಮೊಗ್ಗ : ನಗರದ ನೆಹರು ಕ್ರೀಡಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಜಿಲ್ಲೆಯ 4 ಕಾಮಗಾರಿಗಳ ಉದ್ಘಾಟಿಸಿ, 6 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಇದನ್ನೂ ಓದಿ : ಮರಕ್ಕೆ ಕಾರು ಡಿಕ್ಕಿ ಹೊಡೆದು 6 ಜನ ದುರ್ಮರಣ
ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ, ರಿಮೋಟ್ ಮೂಲಕ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.
43.90 ಕೋ.ರೂ. ವೆಚ್ಚದ ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಸೇರಿ 139.41 ಕೋಟಿಯ 4 ಕಾಮಗಾರಿ ಉದ್ಘಾಟಿಸಿದ ಕೇಂದ್ರ ಸಚಿವರು, 2138.30 ಕೋಟಿ ರೂ. ವೆಚ್ಚದ 6 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಸಮಾರಂಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಬಳ್ಳಾರಿ ಸಂಸದ ದೇವೇಂದ್ರಪ್ಪ, ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್. ಚನ್ನಬಸಪ್ಪ, ರುದ್ರೇಗೌಡ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಉದ್ಘಾಟನೆಗೊಂಡ ಕಾಮಗಾರಿಗಳ ವಿವರ :
1: ಬೈಂದೂರು – ರಾಣೆಬೆನ್ನೂರು ರಸ್ತೆಯ ಮಡೋಡಿ, ಮತ್ತಿಮನೆ, ನಗರ, ಆರೋಡಿ, ಕಾರಣಗಿರಿ, ಮಾವಿನಕೊಪ್ಪ, ಬ್ರಹ್ಮೇಶ್ವರ ಬಳಿ 19.77 ಕೋಟಿ ರೂ. ವೆಚ್ಚದ 7 ಕಿರು ಸೇತುವೆಗಳು
2 : ಶಿವಮೊಗ್ಗ ವಿದ್ಯಾನಗರದಲ್ಲಿ 43.90 ಕೋಟಿ ರೂ. ವೆಚ್ಚದ ರೈಲ್ವೆ ಮೇಲ್ಸೇತುವೆ.
3 : ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ತುಂಗಾ ನದಿಗೆ ಅಡ್ಡಲಾಗಿ 20.12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಸೇತುವೆ.
4 : ತೀರ್ಥಹಳ್ಳಿಯಲ್ಲಿ 55.62 ಕೋಟಿ ರೂ. ವೆಚ್ಚದಲ್ಲಿ ತುಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ, ಬೈಪಾಸ್ ರಸ್ತೆ
ಶಂಕುಸ್ಥಾಪನೆಗೊಂಡ ಕಾಮಗಾರಿಗಳು :
1 : ಹೊಸನಗರದ ಮಾವಿನಕೊಪ್ಪದಿಂದ ಆಡುಗೋಡಿವರೆಗೆ 313.56 ಕೋಟಿ ರೂ. ವೆಚ್ಚದಲ್ಲಿ 13.80 ಕಿ.ಮೀ ಬೈಪಾಸ್ ರಸ್ತೆ, ಬೆಕ್ಕೋಡಿ, ಹೊಸನಗರ ಬಳಿ ಸೇತುವೆಗಳು.
2 : ಶಿವಮೊಗ್ಗದ ಸಿಂಹಧಾಮದಿಂದ ಆನಂದಪುರದವರೆಗೆ 653 ಕೋಟಿ ರೂ. ವೆಚ್ಚದಲ್ಲಿ 4 ಪಥದ ರಸ್ತೆ ನಿರ್ಮಾಣ. ಕುಂಸಿ ಮತ್ತು ಯಡೇಹಳ್ಳಿ ರೈಲ್ವೆ ಮೇಲ್ಸೇತುವೆ. ಕುಂಸಿ, ಚೋರಡಿ, ಕೋಣೆಹೊಸೂರು, ಯಡೇಹಳ್ಳಿ, ಆನಂದಪುರ ಬೈಪಾಸ್ ರಸ್ತೆ ಸೇರಲಿದೆ.
3 : ಹೊಸೂರು ಮತ್ತು ತಾಳಗುಪ್ಪ ಬಳಿ 198.58 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ ಮತ್ತು ಬೈಪಾಸ್ ರಸ್ತೆ ನಿರ್ಮಾಣ.
4 : ಶಿವಮೊಗ್ಗದ ಸಂದೇಶ್ ಮೋಟರ್ಸ್ನಿಂದ ಹರಕೆರೆವರೆಗೆ 39.50 ಕೋಟಿ ರೂ. ವೆಚ್ಚದಲ್ಲಿ 4 ಪಥದ ರಸ್ತೆ ನಿರ್ಮಾಣ.
5 : ಬೈಂದೂರಿನಿಂದ ನಾಗೋಡಿವರೆಗೆ 394.95 ಕೋಟಿ ರೂ. ವೆಚ್ಚದಲ್ಲಿ ದ್ವಿಪಥದ ರಸ್ತೆ ನಿರ್ಮಾಣ.
6 : ತೀರ್ಥಹಳ್ಳಿಯ ನೆಲ್ಲಿಸರದಿಂದ ತೀರ್ಥಹಳ್ಳಿ ಪಟ್ಟಣದವರೆಗೆ 538.71 ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಪಥದ ರಸ್ತೆ ನಿರ್ಮಾಣ.
ಈ ವಿಡಿಯೋ ನೋಡಿ : ವಾರದ ಸಂತೆ ಮೀರಿಸಿದ ಮಕ್ಕಳ ಸಂತೆ https://fb.watch/qn0H4q3fWb/?mibextid=Nif5oz