ಉಡುಪಿ : ಇಲ್ಲಿನ ಸಂತೆಕಟ್ಟೆಯ ರಾ.ಹೆ.-66ರ ಅಂಬಾಗಿಲು ಸಮೀಪದ ಪುತ್ತೂರು ಗ್ರಾಮದ ಶ್ರೀ ಮಾಸ್ತಿ ಅಮ್ಮ ದೇವಸ್ಥಾನದಲ್ಲಿ ಮೇ ೧೦ ರಂದು ಅಕ್ಷಯ ತೃತೀಯ ದಿನದಂದು ದೇವಳದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಜರುಗಲಿರುವುದು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಅಂದು ಬೆಳಿಗ್ಗೆ ಶ್ರೀ ಮಾಸ್ತಿ ಅಮ್ಮ ದೇವಸ್ಥಾನದಲ್ಲಿ ಪ್ರಾರ್ಥನೆ, ಪುಣ್ಯಾಹ, ಕಲಾ ಸಾನಿಧ್ಯಯುಕ್ತವಾಗಿ ಚಂಡಿಕಾಯಾಗ, ಶ್ರೀ ಸತ್ಯನಾರಾಯಣ ಪೂಜೆ, ಪುರ್ಣಾಹುತಿ, ಮಧ್ಯಾಹ್ನ ವಿಶೇಷ ಹೂವಿನ ಅಲಂಕಾರ ಪೂಜೆ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಮಹಾ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿರುವುದು. ಸಂಜೆ ಶ್ರೀ ಲಕ್ಷ್ಮೀ ವೆಂಕಟೇಶ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ ಮತ್ತು ರಾತ್ರಿ ೭.೩೦ಕ್ಕೆ ಮಹಾಪೂಜೆ, ೮ಕ್ಕೆ ಶ್ರೀದೇವಿ ದರ್ಶನ, ಪ್ರಸಾದ ವಿತರಣೆ ನಡೆಯಲಿದೆ ಎಂದು ಗಾಂವಸ್ಕರ್ ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಹಟ್ಟಿಯಂಗಡಿಯ ವಸತಿ ಶಾಲೆಗೆ ಶೇಕಡಾ ನೂರು ಫಲಿತಾಂಶ