ಭಟ್ಕಳ : ತಾಲೂಕಿನ ಶಿರಾಲಿ ಪೇಟೆಯಲ್ಲಿ ಸಾರ್ವಜನಿಕ ಸಹಿ ಸಂಗ್ರಹಣೆ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಭಟ್ಕಳ ತಾಲೂಕು ಸ್ವೀಪ್ ಸಮಿತಿ ವತಿಯಿಂದ ನಡೆದ ಈ ಸಹಿ ಸಂಗ್ರಹಣೆ ಅಭಿಯಾನವನ್ನು ಸಹಾಯಕ ಆಯುಕ್ತೆ ನಯನ ಉದ್ಘಾಟಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಉತ್ತರ ಕನ್ನಡ, ತಾಲೂಕು ಆಡಳಿತ, ತಾಲೂಕು ಪಂಚಾಯತ ಹಾಗೂ ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.
ಇದನ್ನೂ ಓದಿ : ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟನೆ
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ವಿ.ಡಿ ಮೊಗೇರ, ತಹಶೀಲ್ದಾರ್ ನಾಗರಾಜ ನಾಯ್ಕಡ, ಸಹಾಯಕ ಲೆಕ್ಕಾಧಿಕಾರಿ ರಾಜೇಶ ಮಹಾಲೆ, ಪಿ.ಡಿ.ಒ. ನಾಗರಾಜ ಮತ್ತಿತರರು ಉಪಸ್ಥಿತರಿದ್ದರು.