ಶಿರಸಿ : ಬಾಲಕನೊಬ್ಬ ಆಟವಾಡುವಾಗ ಸಿಡಿಲು ಬಡಿದು ಮೃತಪಟ್ಟ ಘಟನೆ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದಿದೆ.


ಆಷ್ಪಕ್ ಅಲಿ (16) ಮೃತ ದುರ್ದೈವಿ. ಬನವಾಸಿಯ ಜಯಂತಿ ಪ್ರೌಢಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಆಟವಾಡುತ್ತಿದ್ದಾಗ ಬಿರುಗಾಳಿ ಸಹಿತ ಭಾರಿ ಮಳೆ ಬರುತ್ತಿತ್ತು. ಈ ವೇಳೆ ಸಿಡಿಲು ಬಡಿದು ಬಾಲಕ ಆಷ್ಪಕ್‌ ಅಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಇದನ್ನೂ ಓದಿ : ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪಿ ಬಂಧನ

ಈತ ಬನವಾಸಿಯ ಮೀನು ಮಾರುಕಟ್ಟೆ ನಿವಾಸಿಯಾಗಿದ್ದಾನೆ. ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.