ಯಲ್ಲಾಪುರ : ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಮತ್ತು ಮಂಡಲ ಪ್ರಮುಖರ ನೇತೃತ್ವದಲ್ಲಿ ನಗರದ ಕಾರ್ಯಕರ್ತರು ಲೋಕಸಭಾ ಚುನಾವಣಾ ನಿಮಿತ್ತ ನಗರದಾದ್ಯಂತ ಮಹಾಸಂಪರ್ಕ ಅಭಿಯಾನದ ಭಾಗವಾಗಿ ಮನೆಮನೆ ಪ್ರಚಾರ ನಡೆಯಿತು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಪಟ್ಟಣದಲ್ಲಿ ಎಲ್ಲ ಅಂಗಡಿಗಳು, ಸಂತೆ ಮಾರುಕಟ್ಟೆ, ರಿಕ್ಷಾ ನಿಲ್ದಾಣ ಹಾಗೂ ಮನೆಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಪ್ರಚಾರ ನಡೆಯಿತು.
ಎಲ್ಲರ ಬಾಯಲ್ಲಿ ‘ಮೋದಿ ಮತ್ತೊಮ್ಮೆ’ ಘೋಷಣೆ ಮೊಳಗುತ್ತಿದೆ. ಎಲ್ಲಾ ಕಡೆಗಳಲ್ಲಿ ಜನರಿಂದ ಉತ್ತಮ ಸ್ಪಂದನೆ ದೊರಕುತ್ತಿದೆ. ಬಿಜೆಪಿ ಈ ಲೋಕಸಭಾ ಚುನಾವಣೆಯಲ್ಲಿ ಹಿಂದಿನ ಚುನಾವಣೆಗಳಿಗಿಂತ ಹೆಚ್ಚು ಬಹುಮತ ಪಡೆದು ನಮ್ಮ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲ್ಲುವುದು ನಿಶ್ಚಿತ. ಅದರಲ್ಲಿಯೂ ಯಲ್ಲಾಪುರ ಮುಂಡಗೋಡ ಕ್ಷೇತ್ರದಿಂದ ಅತ್ಯಧಿಕ ಬಹುಮತ ದೊರೆಯುತ್ತದೆ ಎಂದು ಹರಿಪ್ರಕಾಶ ಕೋಣೆಮನೆ ಹೇಳಿದರು.
ಇದನ್ನೂ ಓದಿ : ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಗೆಲುವಿನ ವಿಶ್ವಾಸ
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಪ್ರಮುಖರಾದ ಉಮೇಶ ಭಾಗ್ವತ್, ಜಿ.ಎನ್. ಗಾಂವ್ಕರ್, ಗಣಪತಿ ಮಾನಿಗದ್ದೆ, ರಾಘವೇಂದ್ರ ಭಟ್ಟ ಹಾಸಣಗಿ, ರಾಮು ನಾಯ್ಕ, ಸೋಮು ನಾಯ್ಕ, ನಗರದ ಕಾರ್ಯಕರ್ತರಾದ ರಾಜೇಶ್ ಭಟ್ಟ, ಶ್ರೀನಿವಾಸ ಭಟ್ಟ, ಇನ್ನೂ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.