ಭಟ್ಕಳ: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ವತಿಯಿಂದ ಹಳೆಯ ಪಿಂಚಣಿ ಜಾರಿಗೆ ಆಗ್ರಹಿಸಿ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಸರಕಾರವು ಎನ್.ಪಿ.ಎಸ್. ರದ್ದುಗೊಳಿಸಿ ಓ.ಪಿ.ಎಸ್. ಜಾರಿಗೊಳಿಸುವ ಭರವಸೆ ನೀಡಿದೆ. ಶೀಘ್ರದಲ್ಲಿ ಹಳೆಯ ಪಿಂಚಣಿಯನ್ನು ಜಾರಿಗೊಳಿಸಬೇಕು. ವಿಳಂಬವಾದಲ್ಲಿ ರಾಜ್ಯ ಸರಕಾರಿ ನೌಕರಿಗೆ ಕೊಡುವ ರೀತಿಯಲ್ಲಿ ಓಪಿಎಸ್ಸನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಇದನ್ನೂ ಓದಿ : ಅಳ್ವೆಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತಸಾಗರ
ಹಿಂದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಾದಾಮಿ ತಾಲೂಕಿನ ಗುಳೇದಗುಡ್ಡದ ನಿವೃತ್ತ ಶಿಕ್ಷಕ ದಿವಂಗತ ಸಿದ್ದಯ್ಯ ಹಿರೇಮಠ ಅವರ ಮನೆಗೆ ಆಗಿನ ವಿರೋಧ ಪಕ್ಷದ ನಾಯಕರಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬಕ್ಕೆ ವೈಯುಕ್ತಿಕವಾಗಿ ಎರಡು ಲಕ್ಷ ಹಣ ನೀಡಿದ್ದರು. ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಅನುದಾನ ರಹಿತ ಅವಧಿಯನ್ನು ಪರಿಗಣಿಸಿ ಪಿಂಚಣಿ ಸೌಲಭ್ಯ ನೀಡುವ ಭರವಸೆ ನೀಡಿದ್ದರು ಎಂಬುದನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ : ಅವೈಜ್ಞಾನಿಕ ಕಾಮಗಾರಿಯಿಂದ ದೇವಸ್ಥಾನದ ಗರ್ಭಗುಡಿ ಕುಸಿತ
ನ್ಯಾಯಾಲಯಗಳ ಆದೇಶದ ಹಿನ್ನೆಲೆಯಲ್ಲಿ ಖಾಸಗಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ೨೦೦೬ರ ಪೂರ್ವದಿಂದ ಸೇವೆ ಸಲ್ಲಿಸುತ್ತಿರುವ, ನಿವೃತ್ತಿ ಹೊಂದಿರುವ ಮತ್ತು ನಿಧನ ಹೊಂದಿರುವ ನೌಕರರ ಕುಟುಂಬದವರಿಗೆ ಸೇವೆಗೆ ಸೇರಿದ ದಿನಾಂಕದಿಂದಲೇ ವೇತನ ನಿಗದಿಪಡಿಸಿದಂತೆ ನಮಗೂ ಸಹ ಹಳೆಯ ನಿಶ್ಚಿತ ಪಿಂಚಿಕೆ ಸೌಲಭ್ಯಕ್ಕೆ (ಸಿಪಿಎಸ್) ಮತ್ತು ಇತರ ಉಚಣಿ ಸೌಲಭ್ಯಗಳನ್ನು ಆಯಾ ಕಾಲದಲ್ಲಿ ಸೇವೆ ಸಲ್ಲಿಸುತ್ತಿರುವ, ನಿವೃತ್ತಿ ಮತ್ತು ನಿಧನ ಹೊಂದಿದವರಿಗೂ ನೀಡುವಂತೆ ಸಚಿವ ಸಂಪುಟದ ಅನುಮೋದನೆ ಮಾಡಿಸಬೇಕು. ನಿವೃತ್ತಿ, ನಿಧನ ಹೊಂದಿರುವ ನೌಕರರಿಗೆ ಹಾಗೂ ಅವರ ಕುಟುಂಬದವರಿಗೆ ಜೀವನ ನಿರ್ವಹಣೆಗಾಗಿ ಹಳೆಯ ನಿಶ್ಚಿತ ಪಿಂಚಣಿ (ಒ.ಎ.ಎಸ್), ಇತರ ಪಿಂಚಣಿ ಸೌಲಭ್ಯಗಳನ್ನು ಒದಗಿಸಿಕೊಡಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಆದೇಶ ಮಾಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.
ಇದನ್ನೂ ಓದಿ : ಕಾಫಿ ಮತ್ತು ರಬ್ಬರ್ ವಲಯದ ಸಾಮಾನ್ಯ ಪಾಲುದಾರರ ಸಭೆ
ಮನವಿಯನ್ನು ಸಹಾಯಕ ಆಯುಕ್ತರ ಅನುಪಸ್ಥಿತಿಯಲ್ಲಿ ಕಚೇರಿ ಸಹಾಯಕ ಪ್ರವೀಣ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಉದಯ ನಾಯ್ಕ, ಅಧ್ಯಕ್ಷ ಕೆ.ಬಿ. ಮಡಿವಾಳ, ಉಪಾಧ್ಯಕ್ಷ ಶ್ರೀಕಾಂತ ಭಟ್ಟ, ಪ್ರ.ಕಾರ್ಯದರ್ಶಿ ಆಗುಣ, ವಿನಾಯಕ ಭಟ್ಟ, ಪ್ರಸಾದ ನಾಯ್ಕ, ರಾಜಾ ಸಾಬ, ಲೀಲಾವತಿ ಮೊಗೇರ, ಶಾಂತಾ ನಾಯ್ಕ, ಗಣಪತಿ ನಾಯ್ಕ, ಇಮ್ರಾನ್ ಮುಲ್ಲಾ ಮತ್ತಿತರರು ಉಪಸ್ಥಿತರಿದ್ದರು.