ಸಾಗರ : ಶರಾವತಿ ಹಿನ್ನಿರಿನ ಹಸಿರುಮಕ್ಕಿ ಲಾಂಚ್ ಸೇವೆ ಇಂದಿನಿಂದ ಪುನರ್ ಆರಂಭಗೊಂಡಿದೆ ಎಂದು ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಮಾಹಿತಿ ನೀಡಿದೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದು ಶರಾವತಿ ಹಿನ್ನೀರಿನಲ್ಲಿ ನೀರಿನ ಕೊರತೆ ಉಂಟಾಗಿ ಹಸಿರುಮಕ್ಕಿ ಲಾಂಚ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ನೀರಿನ ಕೊರತೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಕಳೆದ ಒಂದು ತಿಂಗಳಿಂದ ಸ್ಥಗಿತಗೊಳಿಸಲಾಗಿತ್ತು. ಇದರಿಂದ ನಿಟ್ಟೂರು ಭಾಗದ ಜನರು ಸೇರಿದಂತೆ ಸಾಗರದಿಂದ ಕೊಲ್ಲೂರು ಕುಂದಾಪುರ ತೆರಳುವವರಿಗೆ ಸಾಕಷ್ಟು ಅನಾನುಕೂಲ ಉಂಟಾಗಿತ್ತು. ಸದ್ಯ ಲಾಂಚ್ ಸೇವೆ ಆರಂಭದಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನೂ ಓದಿ : ಕುಮಟಾ ತಾಲೂಕಿನಲ್ಲಿ ಆತಂಕ ಸೃಷ್ಟಿಸಿದ ಆರ್ದ್ರಾ ಮಳೆ