ಭಟ್ಕಳ: ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದಲ್ಲಿ ಸಂಘದ ವಿಶೇಷ ರಾಜ್ಯ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ರಾಧಾಕೃಷ್ಣ ಭಟ್ಟ ಅವರನ್ನು ದೇವಿಮನೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಕಮಿಟಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಇದನ್ನೂ ಓದಿ : ವಿಶೇಷ ರಾಜ್ಯ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ರಾಧಾಕೃಷ್ಣ ಭಟ್ಟ
ಈ ಸಂದರ್ಭದಲ್ಲಿ ಮಾಜಿ ಶಾಸಕ ಸುನೀಲ ನಾಯ್ಕ, ಮಹಾಮಂಡಳದ ಅಧ್ಯಕ್ಷ ಮೋಹನ ಹೆಗಡೆ, ಹೊನ್ನಾವರ ಮಂಡಳದ ಆರ್.ಜಿ. ಹೆಗಡೆ, ಅಧ್ಯಕ್ಷ ದೇವಸ್ಥಾನದ ಆಡಳಿತ ಕಮಿಟಿ ಅಧ್ಯಕ್ಷ ಶಿವಾನಂದ ಹೆಬ್ಬಾರ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿನಾಯಕ ಭಟ್ಟ ಬೆಟ್ಕೂರು, ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗವೇಣಿ ಗೊಂಡ, ಭವತಾರಿಣಿ ವಲಯದ ಆಧ್ಯಕ್ಷ ವಿನಾಯಕ ಎಂ. ಭಟ್ಟ ತೆಕ್ಕನಗದ್ದೆ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ : ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಹೊರ ತನ್ನಿ: ರಾಧಾಕೃಷ್ಣ ಭಟ್ಟ ಕರೆ

ಈ ವಿಡಿಯೋ ನೋಡಿ : ಕಿತ್ರೆ ದೇವಿಮನೆಯಲ್ಲಿ ರಥೋತ್ಸವ ಸಂಭ್ರಮ https://fb.watch/qiOR-MAfQO/?mibextid=Nif5oz