ಭಟ್ಕಳ: ತಾಲೂಕಿನ ಹೆರಾಡಿ ಹೊಳೆಯಲ್ಲಿ ಅಪರಿಚಿತ ಶವವೊಂದು ತೇಲಿಕೊಂಡು ಬಂದಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್  ಫಾಲೋವ್ ಮಾಡಲು ಇಲ್ಲಿ ಒತ್ತಿ.

ಮೃತ ದೇಹದ ಗುರುತು ಇದುವರೆಗೆ ಪತ್ತೆಯಾಗಿಲ್ಲ. ಸುಮಾರು 40 ರಿಂದ 50 ವರ್ಷದವರು ಎಂದು ಅಂದಾಜಿಸಲಾಗಿದೆ. ಬಯಲು ಹೊಳೆಕಟ್ಟೆಯಿಂದ ಹೆರಾಡಿ ಹೊಳೆಯಲ್ಲಿ ಈ ಮೃತ ದೇಹ ತೇಲಿಬಂದಿರಬೇಕು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ : ರಾಬಿತಾ ಎಜ್ಯುಕೇಶನಲ್ ಎಕ್ಸಲೆನ್ಸ್ ಅವಾರ್ಡ್ ಸಮಾರಂಭ

ತಾಲೂಕಿನಾದ್ಯಂತ ವಿಪರೀತ ಮಳೆಯಾಗುತ್ತಿದೆ. ನದಿ ಹಳ್ಳಕೊಳ್ಳಗಳು ತುಂಬಿ ತುಳುಕುತ್ತಿದೆ. ಇದರಿಂದ ನೀರಿನಲ್ಲಿ ಮುಳುಗಿ ಈ ವ್ಯಕ್ತಿ ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಮಾಹಿತಿ ತಿಳಿದು ಮುರುಡೇಶ್ವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪರಿಶೀಲನೆ ನಡೆಸಿ ಮೃತ ದೇಹವನ್ನು ಮುರುಡೇಶ್ವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿದೆ. ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದರೆ ಮುರುಡೇಶ್ವರ ಪೊಲೀಸ್ ಠಾಣೆಗೆ ಸಂಪರ್ಕಿಸಲು ಕೋರಲಾಗಿದೆ.

ಇದನ್ನೂ ಓದಿ : ಅತಿವೃಷ್ಟಿ ಹಿನ್ನೆಲೆ ಉಸ್ತುವಾರಿ ಸಚಿವರಿಂದ ಪರಿಶೀಲನಾ ಸಭೆ