ಹೊನ್ನಾವರ: ಶ್ರೀ ರಾಮನವಮಿ ನಿಮಿತ್ತ ಸ್ವರ್ಣಪುರಸ್ಥ ಶ್ರೀ ಬೇಟೆ ವೀರ ವೆಂಕಟರಮಣ ದೇವರ ಮಹಾರಥೋತ್ಸವ ಸಹಸ್ರಾರು ಸಂಖ್ಯೆಯ ಭಕ್ತಸಾಗರದ ನಡುವೆ ಬುಧವಾರ ವಿಜೃಂಭಣೆಯಿಂದ ನಡೆಯಿತು.

ಇದನ್ನೂ ಓದಿ : ಚನ್ನಪಟ್ಟಣ ಹನುಮಂತ ದೇವರ ಬ್ರಹ್ಮ ರಥೋತ್ಸವ ಸಂಪನ್ನ

ಶ್ರೀ ದೇವರ ಸನ್ನಿಧಿಯಲ್ಲಿ ‌ವಿವಿಧ ಧಾರ್ಮಿಕ ಕಾರ್ಯಕ್ರಮಗಳು ದೇವರ ಪ್ರಾರ್ಥನೆಯೊಂದಿಗೆ ನಡೆದವು. ಭಕ್ತರು ಶ್ರೀ ದೇವರಿಗೆ ಹಣ್ಣು-ಕಾಯಿ ಸೇವೆ, ಅಭಿಷೇಕ, ಅರ್ಚನೆ ಇನ್ನಿತರ ಸೇವೆಗಳನ್ನು ಸಲ್ಲಿಸಿದರು. ಸಂಜೆ ಸಾವಿರಾರು ಭಕ್ತರ ಜಯಘೋಷ ಮಂತ್ರಗಳೊಂದಿಗೆ ರಥಾರೋಹಣ ನಡೆಯಿತು. ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯ ಭಕ್ತರು ಹೊನ್ನಾವರ ದ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಜಾತ್ರಾ ಮಹೋತ್ಸವವನ್ನು ಕಣ್ತುಂಬಿಕೊಂಡರು. ಆಗಮಿಸಿದ ಭಕ್ತಗಣ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.