ಕಾರವಾರ: ವೃತ್ತಿಪರ ಕೋರ್ಸುಗಳಿಗೆ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆಗಳು ಏಪ್ರಿಲ್ ೧೮ ಮತ್ತು ೧೯ರಂದು ಜಿಲ್ಲೆಯ ೧೧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಇದನ್ನೂ ಓದಿ : ಏಪ್ರಿಲ್ ೮ರಿಂದ ಮೂರು ದಿನಕ್ಕೊಮ್ಮೆ ನೀರು : ಎಲ್ಲೆಲ್ಲಿ ಗೊತ್ತಾ?
ಈ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಕಾನೂನು ಬಾಹಿರ ಚಟುವಟಿಕೆ ಮತ್ತು ಅಹಿತಕರ ಘಟನೆಗಳು ನಡೆಯದಂತೆ, ಶಾಂತತಾಭಂಗ ಆಗದಂತೆ ಅಥವಾ ಪರಿಕ್ಷಾ ಕೇಂದ್ರದ ಸುತ್ತಮುತ್ತ ಸಭೆ ಸಮಾರಂಭಗಳು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ತಡೆಯುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಪರೀಕ್ಷೆ ನಡೆಯುವ ಸಮಯದಿಂದ ಪರೀಕ್ಷಾ ಅವಧಿ ಮುಕ್ತಾಯವಾಗುವವರೆಗೆ ಪರೀಕ್ಷೆ ನಡೆಯುವ ಎಲ್ಲ ೧೧ ಕೇಂದ್ರಗಳಲ್ಲಿ ಅವುಗಳ ಸುತ್ತಲಿನ ೨೦೦ ಮೀಟರ್ ಪ್ರದೇಶವನ್ನು ಸೆಕ್ಷನ್ ೧೪೪ ರಂತೆ ನಿಷೇಧಿತ ಪ್ರದೇಶವೆಂದು ನಿಷೇದಾಜ್ಞೆಯನ್ನು ಘೋಷಿಸಲಾಗಿದೆ. ಈ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಮತ್ತು ಸೈಬರ್ ಕೆಫೆಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ.
ಇದನ್ನೂ ಓದಿ : ಉತ್ತರ ಕನ್ನಡ ಕ್ಷೇತ್ರದಿಂದ ಸ್ವಾಮೀಜಿ ಸ್ಪರ್ಧೆ : ದಿಢೀರ್ ನಿರ್ಧಾರ ಬದಲು