ಭಟ್ಕಳ: ಮುರಿನಕಟ್ಟೆ (Murinakatte) ವಿವಾದದ ಹಿನ್ನೆಲೆ ಭಟ್ಕಳ (Bhatkal) ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿ ಪೊಲೀಸರು ಒಟ್ಟು ೫ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದ್ದು, ಈವರೆಗೆ ೪೦ ಮಂದಿಯನ್ನು ವಶಕ್ಕೆ ಪಡೆದು ಕಾನೂನುಕ್ರಮ ಕೈಗೊಂಡಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಪೊಲೀಸ್ ಇಲಾಖೆ (Police Department) ನೀಡಿದ ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹೆದ್ದಾರಿ (National Highway)-೬೬ರ ಅಗಲೀಕರಣ ಕಾಮಗಾರಿಯ ಹಿನ್ನೆಲೆ ಅಮ್ಮನವರ ಹೊರೆ ಇಡುವ ಮೂಲ ಮುರಿನಕಟ್ಟೆ(Murinakatte)ಯನ್ನು ಸ್ಥಳಾಂತರಿಸುವ ಉದ್ದೇಶದಿಂದ ಹೆದ್ದಾರಿ ಪಕ್ಕದ ಸರ್ಕಾರಿ ಜಾಗದಲ್ಲಿ ಹೊಸ ಕಟ್ಟೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಮೇ ೨೪ರ ರಾತ್ರಿ ಕೆಲ ಕಿಡಿಗೇಡಿಗಳು ಅಕ್ರಮವಾಗಿ ಗುಂಪುಗೂಡಿ ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಅಡ್ಡಿಪಡಿಸಿ, ನಿರ್ಮಾಣ ಹಂತದಲ್ಲಿದ್ದ ಹೊಸ ಮುರಿನಕಟ್ಟೆಯನ್ನು ಧ್ವಂಸಗೊಳಿಸಲು ಮುಂದಾಗಿದ್ದರು ಎಂದು ಆರೋಪಿಸಲಾಗಿದೆ.

BJP protest/ ಮೇ ೨೯ರಂದು ಭಟ್ಕಳದಲ್ಲಿ ಬಿಜೆಪಿ ಪ್ರತಿಭಟನೆ 

ಈ ವೇಳೆ ತಡೆಯಲು ತೆರಳಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಆರೋಪವೂ ಕೇಳಿಬಂದಿದೆ. ಅಲ್ಲದೆ, ಘಟನೆಯ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಕಸಿದುಕೊಂಡು ಹಲ್ಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Murinakatte incident/ ಭಟ್ಕಳದಲ್ಲಿ ಪೊಲೀಸರ ಪಥ ಸಂಚಲನ

ಇದೇ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ವಿಡಿಯೋ ಪ್ರಸಾರ ಮಾಡಿ ಘಟನೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಭಟ್ಕಳದ ಆಜಾದ್‌ನಗರ ನಿವಾಸಿ ಮೊತೀಬ್ ಮಹಮ್ಮದ್ ವಿರುದ್ಧವೂ ಪ್ರಕರಣ ದಾಖಲಿಸಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Murinakatte/ ಮುರಿನಕಟ್ಟೆ ಕೆಡವಿಗೆ ಕಾಂಗ್ರೆಸ್ ಖಂಡನೆ

ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಭಟ್ಕಳ ನಗರದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ವಿವಿಧ ಹುದ್ದೆಗಳ ಸುಮಾರು ೮೫೦ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಡಿಎಆರ್, ಕೆಎಸ್‌ಆರ್‌ಪಿ ಹಾಗೂ ಸ್ಪೆಷಲ್ ಆಕ್ಷನ್ ಫೋರ್ಸ್ ತುಕಡಿಗಳನ್ನೂ ನಿಯೋಜಿಸಲಾಗಿದೆ.

Murinakatte/ ಮುರಿನಕಟ್ಟೆ ಮರುನಿರ್ಮಾಣಕ್ಕೆ ೪೮ ಗಂಟೆ ಗಡುವು 

ಭಟ್ಕಳದಲ್ಲಿ ಸದ್ಯ ಶಾಂತ ಪರಿಸ್ಥಿತಿ ನೆಲೆಸಿದ್ದು, ಸಾರ್ವಜನಿಕರು ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲಾಗಿದ್ದು, ಪ್ರಚೋದನಕಾರಿ ಅಥವಾ ಸುಳ್ಳು ಸಂದೇಶ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Murinakatte/ ಮುರಿನಕಟ್ಟೆ  ಕಟ್ಟಿಯೇ ಸಿದ್ದ: ಸುನೀಲ ನಾಯ್ಕ ಘೋಷಣೆ