ಹೊನ್ನಾವರ : ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸೊಂದು (Private bus) ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರ (Honnavar) ತಾಲೂಕಿನ ಗೇರುಸೊಪ್ಪದ (Gerusoppa) ಬಳಿ ಅಪಘಾತಕ್ಕೀಡಾಗಿ ೯ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಚಿಕ್ಕಮಗಳೂರಿನಿಂದ (Chikkamagaluru) ಹೊರಟಿದ್ದ ಈ ಖಾಸಗಿ ಬಸ್ಸು (Private bus) ಶಿವಮೊಗ್ಗ (Shivamogga), ಹೊನ್ನಾವರ ಮಾರ್ಗವಾಗಿ ಗೋವಾಕ್ಕೆ (Goa) ತೆರಳುತ್ತಿತ್ತು. ಭಾನುವಾರ ಸಂಜೆ ಗೇರುಸೊಪ್ಪದಿಂದ (Gerusoppa) ೨ ಕಿಮೀ ದೂರದಲ್ಲಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದೆ. ಅಪಘಾತದ ರಭಸಕ್ಕೆ ಬಸ್ಸಿನಲ್ಲಿ ಸಂಚರಿಸುತ್ತಿದ್ದ ೯ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ : Naval Base/ ನೌಕಾನೆಲೆ ಸಿಬ್ಬಂದಿ ಮಲಗಿದ್ದಲ್ಲೇ ಸಾವು
ಗಾಯಗೊಂಡ ಕೆಲವರನ್ನು ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರು ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸರ್ಕಾರಿ ಸ್ವಾಮ್ಯದ ೧೦೮ ಹಾಗೂ ಖಾಸಗಿ ಆಂಬುಲೆನ್ಸ್ ಮೂಲಕ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : Microfinance/ ಜೀವನ ಅಂತ್ಯಕ್ಕೆ ಮುಂದಾದ ಮೈಕ್ರೋಫೈನಾನ್ಸ್ ಸಿಬ್ಬಂದಿ