ಭಟ್ಕಳ : ಇಲ್ಲಿನ ಪ್ರತಿಷ್ಠಿತ ಐ.ಸಿ.ಎಸ್.ಇ ಪಠ್ಯಕ್ರಮದ ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನವು ವಿದ್ಯೋತ್ಸವ (Vidyotsava) ದಿನಾಂಕ ೨೦/೧೨/೨೦೨೫ ಶನಿವಾರ ಮತ್ತು ೨೨/೧೨/೨೦೨೫ ಸೋಮವಾರದಂದು ಯಶಸ್ವಿಯಾಗಿ ಜರುಗಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಶನಿವಾರ ನಡೆದ ಪೂರ್ವ ಪ್ರಾಥಮಿಕ ಶಾಲಾ ಹಂತದ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ, ಕರುಣಾನಿಧಿ ಕೆ ಮಾತನಾಡಿ, ವಿದ್ಯಾಂಜಲಿ ಶಾಲೆಯು ಆಧುನಿಕ ತಂತ್ರಜ್ಞಾನಾಧಾರಿತ ಪಠ್ಯಕ್ರಮವನ್ನು ಮಕ್ಕಳಿಗೆ ಭೋಧಿಸುತ್ತಿದ್ದು, ಮಕ್ಕಳು ಹಾಗೂ ಪಾಲಕರು ಇದರ ಸದುಪಯೋಗ ಪಡೆಯಬೇಕೆಂದು ಕರೆ ನೀಡಿದರು.
ಇದನ್ನು ಓದಿ: Cleaning/ ಹಿಂದೂ ರುದ್ರಭೂಮಿ ಸ್ವಚ್ಛಗೊಳಿಸಿದ ಕ್ರಿಯೇಟಿವ್ ಬಾಯ್ಸ್
ಸೋಮವಾರ ನಡೆದ ಪ್ರಾಥಮಿಕ ಹಾಗೂ ಫ್ರೌಢಶಾಲಾ ಹಂತದ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ಕೆ.ಎಮ್.ಸಿ ಮಣಿಪಾಲ ಆಸ್ಪತ್ರೆಯ ಹೆಸರಾಂತ ನವಜಾತ ಶಿಶು ತಜ್ಞ ಡಾ.ಲೆಸ್ಲಿ ಎಡವರ್ಡ ಲಿವಿಸ್ ಮಾತನಾಡಿ, ಪಾಲಕರು ಹಾಗೂ ಶಿಕ್ಷಕರು ಬಾಲ್ಯದಲ್ಲಿಯೇ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಹಾಗೂ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಬಹು ಮುಖ್ಯ ಪಾತ್ರ ವಹಿಸುತ್ತದೆ ಎಂದು ಅರಿವು ಮೂಡಿಸಿದರು.
ಇದನ್ನು ಓದಿ: Lecture/ ಶಿರಾಲಿಯಲ್ಲಿ ಶಿಕ್ಷಕರ ಸಬಲೀಕರಣ ಉಪನ್ಯಾಸ
ಭಟ್ಕಳ ಎಜ್ಯುಕೇಶನ ಟ್ರಸ್ಟನ ಚ್ಯೇರಮನ್ ಡಾ.ಸುರೇಶ ನಾಯಕ ಶಾಲೆಯ ಶಿಕ್ಷಕರ ಮತ್ತು ಪೋಷಕರ ಪರಿಶ್ರಮವನ್ನು ಶ್ಲಾಘಿಸಿದರು.ಇದೇ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ, ಭಟ್ಕಳ ಎಜ್ಯಕೇಷನ್ ಟ್ರಸ್ಟ್ ನ ಭವಿಷ್ಯದ ಯೋಜನೆಗಳ ಕುರಿತು ಬೆಳಕು ಚೆಲ್ಲಿದರು ಹಾಗೂ ಪಾಲಕರು ಶಾಲೆಯ ಮೇಲೆ ಇಟ್ಟಿರುವ ಅಚಲ ವಿಶ್ವಾಸವನ್ನು ಕೊಂಡಾಡಿದರು.
ಇದನ್ನು ಓದಿ: Bhatkal/ ವ್ಯಾಪಾರ ಮೇಳ ಉದ್ಘಾಟನೆ
ಪ್ರಾಂಶುಪಾಲ ರಾಘವೇಂದ್ರ ಕಾಮತ ಶಾಲೆಯ ವಾರ್ಷಿಕ ವರದಿಯನ್ನು ಪ್ರಸ್ತುತ ಪಡಿಸಿದರು. ಸಭಾ ಕಾರ್ಯಕ್ರಮದ ಬಳಿಕ ಅದ್ದೂರಿಯಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮವು ನೆರೆದಿದ್ದ ಪ್ರೇಕ್ಷಕರ ಕಣ್ಮನ ಸೂರೆಗೊಳಿಸಿತು./ Vidyotsava
ಇದನ್ನು ಓದಿ: Murudeshwara/ 11 ಮಂದಿ ಬಂಧನ; ನಗದು–ಮೊಬೈಲ್ ವಶ


