ಕಾಸರಗೋಡು: ಉತ್ತರ ಕನ್ನಡ (Uttara Kannada) ಜಿಲ್ಲೆಯ ಪ್ರತಿಭಾನ್ವಿತ ಕವಿ ಗಾಯಕ ಉಮೇಶ ಮುಂಡಳ್ಳಿ ಕಾಸರಗೋಡು (kasaragod) ಕನ್ನಡ (Kannada) ಭವನದ ೨೦೨೬ನೇ ಸಾಲಿನ ಪ್ರತಿಷ್ಠಿತ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್” (Achievement Award)ಗೆ ಆಯ್ಕೆಯಾಗಿದ್ದಾರೆ. ಕೇರಳ (Kerala) ಕಾಸರಗೋಡು ಕನ್ನಡ ಭವನದ ಸಂಸ್ಥಾಪಕ ಅಧ್ಯಕ್ಷ ಡಾ ವಾಮನ್ ರಾವ್ ಬೇಕಲ್ ಮತ್ತು ಕಾರ್ಯದರ್ಶಿ ವಸಂತ ಕೆರೆಮನೆ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕನ್ನಡ ಭವನದ ರಜತ ಮಹೋತ್ಸವ ಹಾಗೂ ನಾಡು ನುಡಿ ಹಬ್ಬದ ವಿಶೇಷ ಸಂದರ್ಭದಲ್ಲಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಾಹಿತ್ಯ ಸಂಗೀತ ಮತ್ತು ಕಲಾ ಕ್ಷೇತ್ರದಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಇದೇ ಬರುವ ಜನವರಿ ೧೮ರಂದು ಕೇರಳ ರಾಜ್ಯದ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ನಡೆಯುವ ಕನ್ನಡ ಭವನ ರಜತ ಸಂಭ್ರಮ-ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ ಕನ್ನಡ ಪಯಸ್ವಿನಿ ಪ್ರಶಸ್ತಿ (Achievement Award) ಪ್ರದಾನ ಮಾಡಲಾಗುವುದು ಎಂದು ಪಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ: Murudeshwar/ ಮುರುಡೇಶ್ವರದಲ್ಲಿ ಕಳ್ಳರಿದ್ದಾರೆ ಎಚ್ಚರಿಕೆ!!



