ಭಟ್ಕಳ: ಪ್ರಸಿದ್ಧ ಪ್ರವಾಸಿ ತಾಣವಾದ ಮುರ್ಡೇಶ್ವರದ ಮಾತೋಭಾರ ಶ್ರೀ ಮುರ್ಡೇಶ್ವರ ದೇವರ ರಥೋತ್ಸವ (Murdeshwar Jathre) ಸಾವಿರಾರು ಭಕ್ತರ ಹರ್ಷೋದ್ಗಾರಗಳ ನಡುವೆ ವಿಜೃಂಭಣೆಯಿಂದ ಜರಗಿತು.
ಜಾತ್ರೆಯ ವಿಡಿಯೋವನ್ನು ಇನ್ಸ್ಟಾಗ್ರಾಂ ಮತ್ತು ಫೇಸ್ಬುಕ್ ನಲ್ಲಿ ವೀಕ್ಷಿಸಬಹುದು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಜನವರಿ ೧೫ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದ್ದು, ಮಹಾರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಹೋಮ ಹವನಗಳನ್ನು ವಿಧಿವತ್ತಾಗಿ ನಡೆಸಲಾಯಿತು. ಮಧ್ಯಾಹ್ನದಿಂದ ಸಾವಿರಾರು ಭಕ್ತರು ರಥಕಾಣಿಕೆ ನೀಡಿ, ಪೂಜೆ ಪುರಸ್ಕಾರ ನೆರವೇರಿಸಿ, ರಥೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಇದನ್ನು ಓದಿ: Murudeshwar/ ಟ್ಯಾಟೂ ಅಂಗಡಿಗೆ ನುಗ್ಗಿದ ಗ್ಯಾಂಗ್
ಸಂಜೆ ೫.೩೦ರ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥ ಎಳೆಯುವುದಕ್ಕೂ ಮುನ್ನ ತೆಂಗಿನಕಾಯಿಯನ್ನು ರಥದ ಮುಂಭಾಗ ಒಡೆಯುತ್ತಾ ಭಕ್ತರು ಹರಹರ ಮಹಾದೇವ ಜಯಘೋಷ ಮೊಳಗಿಸಿದರು. ಮಹಾರಥವನ್ನು ದೇವಸ್ಥಾನದ ಕೆರೆಯ ಸುತ್ತ ಎಳೆದು ಭಕ್ತರು ಪುನೀತರಾದರು. ರಥೋತ್ಸವದಲ್ಲಿ (Murdeshwar Jathre) ಸುಮಾರು ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.
ಇದನ್ನು ಓದಿ: Accident/ ಮೂವರಿದ್ದ ಬೈಕ್ ಕಾರಿಗೆ ಡಿಕ್ಕಿ: ಇಬ್ಬರಿಗೆ ಗಾಯ; ಕಾರು ಚಾಲಕನ ವಿರುದ್ಧ ಪ್ರಕರಣ
ಈ ಸಂದರ್ಭದಲ್ಲಿ ಉತ್ತರ ಕನ್ನಡ ಉಸ್ತುವಾರಿ ಸಚಿವ ಮಂಕಾಳ ವೈದ್ಯ (Mankal Vaidya), ಮಾವಳ್ಳಿ ೧ ಗ್ರಾಮ ಪಂಚಾಯತ್ ಅಧ್ಯಕ್ಷೆ ನಯನಾ ನಾಯ್ಕ, ದೇವಸ್ಥಾನ ಆಡಳಿತ ಧರ್ಮದರ್ಶಿ ಸತೀಶ್ ಆರ್ ಶೆಟ್ಟಿ, ದೇವಸ್ಥಾನ ಪ್ರಧಾನ ಅರ್ಚಕ ಜಯರಾಮ ಅಡಿ, ಬ್ಲಾಕ್ ಕಾಂಗ್ರೆಸ್ (Congress) ಅಧ್ಯಕ್ಷ ವೆಂಕಟೇಶ ನಾಯ್ಕ, ಎ ಪಿ ಎಂ ಸಿ ಮಾಜಿ ಅಧ್ಯಕ್ಷ ಗೋಪಾಲ ನಾಯ್ಕ, ಕಾಂಗ್ರೆಸ್ ರಾಜ್ಯ ಮಹಿಳಾ ಕಾರ್ಯದರ್ಶಿ ಬೀನಾ ವೈದ್ಯ, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣ ನಾಯ್ಕ ಜಮೀನ್ದಾರ, ಕೈಕಿಣಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜು ನಾಯ್ಕ, ಶಂಕರ ಭಟ್ರಹಿತ್ಲು, ಉದ್ಯಮಿ ಗಣೇಶ್ ಹರಿಕಾಂತ್, ಸಮಾಜ ಸೇವಕ ಹಾಗೂ ಉದ್ಯಮಿ ಮಾಸ್ತಪ್ಪ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.
ಇದನ್ನು ಓದಿ: woman dies/ ಒಲೆಯ ಬೆಂಕಿ ತಗುಲಿ ಗಂಭೀರಗೊಂಡಿದ್ದ ವೃದ್ಧೆ ಕೊನೆಯುಸಿರು
ಉತ್ತರ ಕನ್ನಡ (Uttara Kannada) ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಡಿ ವೈ ಎಸ್ ಪಿ ಮಹೇಶ ಎಂ ಕೆ, ಮುರ್ಡೇಶ್ವರ ವೃತ್ತ ನಿರೀಕ್ಷಕ ಜಗದೀಶ ಹಂಚನಾಳ್ ಹಾಗೂ ಪಿ ಎಸ್ ಐ ಹನುಮಂತ ಬಿರಾದಾರ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ವಿಡಿಯೋ ಸಹಿತ ಇದನ್ನು ಓದಿ: Video viral/ ಕಚೇರಿಯಲ್ಲೇ ಡಿಸಿಆರ್ಇ ಡಿಜಿಪಿ ರಾಮಚಂದ್ರ ರಾವ್


