ಭಟ್ಕಳ: ತಾಲೂಕಾಡಳಿತ ಹಾಗೂ ಭಾರತ ಚುನಾವಣಾ ಆಯೋಗದ ಸಂಯುಕ್ತ ಆಶ್ರಯದಲ್ಲಿ ೧೬ನೇ ರಾಷ್ಟ್ರೀಯ ಮತದಾರರ ದಿನಾಚರಣೆ (National Voters Day) ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಭಟ್ಕಳ (Bhatkal) ತಾಲೂಕಿನ ತಾಲೂಕ ಆಡಳಿತ ಸೌಧದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಕಾರ್ಯಕ್ರಮವನ್ನು ಉದ್ಘಾಟಿಸಿ ಸವಿತಾ ಮಹರ್ಷಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಹಶೀಲ್ದಾರ್ ನಾಗೇಂದ್ರ ಕೊಳಶೆಟ್ಟಿ ಮಾತನಾಡಿದರು.

ಇದನ್ನು ಓದಿ: New buses/ ಬಿಜೆಪಿ, ಕಾಂಗ್ರೆಸ್ ಉತ್ತರ ಕನ್ನಡ ಜಿಲ್ಲೆಗೆ ಕೊಟ್ಟ ಹೊಸ ಬಸ್ ಎಷ್ಟು ಗೊತ್ತಾ?

ಕಾರ್ಯಕ್ರಮದಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್ಒ) ಕಿಟ್‌ಗಳನ್ನು ವಿತರಿಸಲಾಯಿತು. ಜೊತೆಗೆ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಗೌರವಿಸಲಾಯಿತು. ದಿ ನ್ಯೂ ಇಂಗ್ಲಿಷ್ ಪಿ.ಯು. ಕಾಲೇಜಿನ ಉಪನ್ಯಾಸಕಿ ಶ್ಯಾಮಲಾ ಕಾಮತ ಮತದಾರರ ದಿನಾಚರಣೆಯ (National Voters Day) ಮಹತ್ವ ಹಾಗೂ ಮತದಾನದ ಅಗತ್ಯತೆಯ ಕುರಿತು ಉಪನ್ಯಾಸ ನೀಡಿದರು.

ಇದನ್ನು ಓದಿ: Man missing/ ವ್ಯಕ್ತಿ ನಾಪತ್ತೆ; ಪತ್ನಿ ದೂರು

ಈ ಸಂದರ್ಭದಲ್ಲಿ ವಕೀಲರ ಸಂಘದ ಈಶ್ವರ ನಾಯ್ಕ, ಕಾರ್ಯನಿರ್ವಹಣಾಧಿಕಾರಿ ಸುನೀಲ್ ಎಂ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವುಡ, ನಗರ ಠಾಣೆಯ ಪಿಎಸ್ಐ ನವೀನ ನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವಿಡಿಯೋ ಸಹಿತ ಇದನ್ನು ಓದಿ: Kenda Seve/ ಭಟ್ಕಳ ಸೋಡಿಗದ್ದೆ ಶ್ರೀ ಮಹಾಸತಿ ದೇವಿಯ ಕ್ಷೇತ್ರದಲ್ಲಿ ಹರಕೆಯ ಕೆಂಡ ಸೇವೆ ಸಂಪನ್ನ