ಭಟ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಮಾವಳ್ಳಿ–೨ ಹೋಬಳಿಯ ಗ್ರಾಮ ಸಹಾಯಕ ಕೃಷ್ಣ ಅನಂತ ದೇವಡಿಗ (೫೨) ಭಾನುವಾರ ನಿಧನರಾದರು (passes away). ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕಳೆದ ೩೨ ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಗ್ರಾಮ ಸಹಾಯಕರಾಗಿ ಸೇವೆ ಸಲ್ಲಿಸಿದ್ದ ಅವರು, ಕರ್ತವ್ಯನಿಷ್ಠೆ ಮತ್ತು ಜನಸೇವೆಯ ಮೂಲಕ ಜನಮನ್ನಣೆ ಗಳಿಸಿದ್ದರು. ಅಂತಿಮ ದರ್ಶನಕ್ಕೆ ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾಮ ಸಹಾಯಕ ಸಂಘದ ಪ್ರಮುಖರು ಹಾಗೂ ಸಹೋದ್ಯೋಗಿಗಳು ಭೇಟಿ ನೀಡಿ ಶ್ರದ್ಧಾಂಜಲಿ ಅರ್ಪಿಸಿದರು. (passes away)
ಇದನ್ನು ಓದಿ: Republic Day/ ಭಟ್ಕಳದಲ್ಲಿ ಗಣರಾಜ್ಯೋತ್ಸವ ಆಚರಣೆ; ತಹಶೀಲ್ದಾರ್ ರಾಷ್ಟ್ರಧ್ವಜಾರೋಹಣ



