ಕಾರವಾರ : ಉತ್ತರಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ಮೋರ್ಚಾದ ನಾರಿಶಕ್ತಿ ವಂದನ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ಸಂತೋಷ್ ನಾಯ್ಕ್ ನೇತೃತ್ವದಲ್ಲಿ ನಗರದ ಮಾಲಾದೇವಿ ಮೈದಾನದಿಂದ ಶ್ರೀ ಸಿದ್ದಿ ವಿನಾಯಕ ದೇವಾಲಯದವರೆಗಿನ ಬೃಹತ್ ಮೆರವಣಿಗೆ ನಡೆಯಿತು.

ಇದನ್ನೂ ಓದಿ : ತೆಂಗನಗುಂಡಿಯಲ್ಲಿ ಮತ್ತೆ ಹಾರಾಡಿದ ಭಗವಾಧ್ವಜ


ಈ ಸಂದರ್ಭದಲ್ಲಿ ಮಾತನಾಡಿದ ರೂಪಾಲಿ ನಾಯ್ಕ, ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ 33 ಮೀಸಲಾತಿಯನ್ನು ನೀಡಿದ್ದಾರೆ. ಹೆಣ್ಣುಮಕ್ಕಳಿಗೆ ಶಕ್ತಿ ನೀಡಲು ಮೊದಲ ಬಾರಿಗೆ ಈ ಮಸೂದೆಯನ್ನು ಜಾರಿಗೆ ತಂದಿದ್ದಾರೆ. ಕಾಡಿಗೆ ಹೋಗಿ ಕಟ್ಟಿಗೆ ತರುವುದನ್ನು ತಪ್ಪಿಸಿ ಮಹಿಳೆಯರ ಕಣ್ಣೀರು ವರಿಸಲು ಉಜ್ವಲ ಗ್ಯಾಸ್‌ ಯೋಜನೆಯನ್ನು ಜಾರಿಗೆ ತಂದು ಸುಮಾರು 8 ಕೋಟಿ ಜನರಿಗೆ ಸೌಲಭ್ಯ ಒದಗಿಸಿದ್ದಾರೆ. ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚು ಮಹತ್ವವನ್ನು ನೀಡಿದ್ದಾರೆ. ರೈತ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.

ಈ ವಿಡಿಯೋ ನೋಡಿ : ಮತ್ತೆ ಹಾರಾಡಿದ ಭಗವಾಧ್ವಜ  https://fb.watch/qBxaVzgphK/?mibextid=Nif5oz


ಕೊಟ್ಯಂತರ ಜನರ ಕನಸಾಗಿದ್ದ ಪ್ರಭು ಶ್ರೀ ರಾಮ ಮಂದಿರ ನಿರ್ಮಾಣ ಮಾಡಿ ಜನರ ಕನಸು ನನಸಾಗಿಸಿದ್ದಾರೆ. ಕಾಶಿ, ಮಥುರಾ, ವಾರಣಾಸಿ ಹೀಗೆ ವಿವಿಧ ಸ್ಥಳಗಳ ದೇವಾಲಯಗಳ ಅಭಿವೃದ್ಧಿ ಮಾಡಲು ಮುಂದಾಗಿದ್ದಾರೆ. ಅಲ್ಲದೇ, ಭಕ್ತಾದಿಗಳಿಗೆ ತೆರಳಲು ಅನುಕೂಲವಾಗುವಂತೆ ಮಾಡಿದ್ದಾರೆ. ನಮ್ಮೆಲ್ಲರಿಗೂ ಮೋದಿಯೇ ಗ್ಯಾರಂಟಿ ಬೇರೆ ಯಾವುದೇ ಗ್ಯಾರಂಟಿ ವಾರಂಟಿಗಳಿಲ್ಲ. ರಾಜ್ಯ ಸರ್ಕಾರ ಗ್ಯಾರಂಟಿಯ ಹೆಸರಿನಲ್ಲಿ ಬಡ ಜನರಿಗೆ ತೊಂದರೆಕೊಡುತ್ತಿದೆ ಎಂದರು.

ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮೂರು ದಿನ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಇಂದು ಮ್ಯಾರಥಾನ್ ಪೂರ್ಣಗೊಂಡಿದ್ದು, ವಿಧಾನಸಭಾ ಕ್ಷೇತ್ರವಾರು ನಾಳೆ ಬೈಕ್‌ ರ್ಯಾಲಿ, ಮತ್ತು ಮೂರನೆಯ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡುವ ಮೂಲಕ ಸಮಾರೋಪಗೊಳ್ಳಲಿದೆ. ಈ ಎಲ್ಲ ಕಾರ್ಯಕ್ರಮಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಭಟ್ಟ, ಕಾರವಾರ ಮಹಿಳಾ ಮೋರ್ಚಾದ ಕಲ್ಪನಾ ನಾಯ್ಕ, ವೈಶಾಲಿ ತಾಂಡೇಲ, ಕಾರವಾರ ನಗರ ಮಂಡಲದ ನಾಗೇಶ ಕುರ್ಡೇಕರ, ಗ್ರಾಮೀಣ ಮಂಡಲ‌ದ‌ ಸುಭಾಷ ಗುನಗಿ ಸೇರಿದಂತೆ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.