ಭಟ್ಕಳ: ಸಾರಾಯಿ ಕುಡಿಯಲು ಹಣ ಕೇಳಿ ಕೊಡದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ (Life threatened) ಹಾಕಿದ ಘಟನೆ ನಡೆದಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಹಾವೇರಿ (Haveri)ಜಿಲ್ಲೆಯ ಕರ್ಜಗಿ ಗ್ರಾಮದ ದೇವೇಂದ್ರಪ್ಪ (೪೫) ಅವರು ನೀಡಿದ ದೂರಿನ ಪ್ರಕಾರ, ಅವರೊಂದಿಗೆ ಕೆಲಸ ಮಾಡುತ್ತಿದ್ದ ಲಕ್ಷ್ಮೀಕಾಂತ (೪೨) ಕೆಲಸದ ಸ್ಥಳಕ್ಕೆ ಬಂದು ಸಾರಾಯಿ ಕುಡಿಯಲು ಹಣ ಕೇಳಿದ್ದಾನೆ. ಹಣ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಕೋಪಗೊಂಡ ಆರೋಪಿ, ಅಲ್ಲಿ ಇದ್ದ ಕಬ್ಬಿಣದ ರಾಡ್‌ನಿಂದ ದೂರುದಾರರ ಮೇಲೆ ಹಲ್ಲೆ ನಡೆಸಿ ತಲೆಯ ಭಾಗ, ಕೈ ಹಾಗೂ ಬೆನ್ನಿಗೆ ಗಾಯಗೊಳಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಣ ಕೊಡದಿದ್ದರೆ ಜೀವಕ್ಕೆ ಅಪಾಯ ಉಂಟುಮಾಡುವುದಾಗಿ ಬೆದರಿಕೆ ಹಾಕಿದ್ದಾನೆ (Life threatened) ಎನ್ನಲಾಗಿದೆ. ಈ ಸಂಬಂಧ ಮುರುಡೇಶ್ವರ (Murudeshwar) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Jackfruit Mela/ ಭಟ್ಕಳದಲ್ಲಿ “ನಿತ್ಯ ಹಲಸು ಮೇಳ”ಕ್ಕೆ ಚಾಲನೆ