ಕಾರವಾರ : ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಪ್ರಸ್ತುತ ಖಾಲಿ ಇರುವ ೨೦೨ ಸ್ವಯಂಸೇವಕ ಗೃಹರಕ್ಷಕ/ಗೃಹರಕ್ಷಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಾರವಾರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಮಾರ್ಚ್ ೬ ರಂದು ಬೆಳಗ್ಗೆ ೮ ಗಂಟೆಗೆ ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಯಲಿದೆ.
ಇದನ್ನೂ ಓದಿ : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಶಿರಸಿಗೆ
ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯ ಮೂಲ ಪ್ರತಿ ಮತ್ತು ಆಧಾರ ಕಾರ್ಡ್ ಮೂಲ ಪ್ರತಿಯನ್ನು ಹಾಜರುಪಡಿಸಬೇಕು. ಇಲ್ಲವಾದಲ್ಲಿ ಅಂಥವರ ಅಭ್ಯರ್ಥಿತನವನ್ನು ರದ್ದುಪಡಿಸಲಾಗುವುದು. ದೈಹಿಕ ಪರೀಕ್ಷೆ ಪೂರೈಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುವದು. ಗೃಹರಕ್ಷಕ ಆಯ್ಕೆ ಸಮಿತಿಯ ತೀರ್ಮಾನ ಅಂತಿಮವಾಗಿರುತ್ತದೆ ಎಂದು ಗೃಹರಕ್ಷಕ ದಳದ ಸಮಾದೇಷ್ಟರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವಿಡಿಯೋ ನೋಡಿ : https://fb.watch/qBBEdyaht8/?mibextid=Nif5oz