ಭಟ್ಕಳ: ನಾಗಶ್ರೀ ಮಾರ್ಷಲ್ ಆರ್ಟ್ಸ್ ನಲ್ಲಿ ಕರಾಟೆ ತರಬೇತಿಯನ್ನು ಪಡೆಯುತ್ತಿರುವ (Karate students) ಆನಂದಾಶ್ರಮ ಹೈಸ್ಕೂಲ್ ವಿದ್ಯಾರ್ಥಿಗಳಾದ ವಸುಂಧರಾ ನಾಯ್ಕ ೯೮.೨೪% ಮತ್ತು ಯಶಸ್ ಮೊಗೇರ ೯೨.೦೪% ಹಾಗೂ ವಿದ್ಯಾಭಾರತಿ ಆಂಗ್ಲ ಮಾಧ್ಯಮದ ರತನ್ ಪಾವಸ್ಕರ್ ೭೫.೫% ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕ ಗಳಿಸಿ ಉತ್ತ ಸಾಧನೆ ಮಾಡಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ (Karate students) ಸ್ಪೋರ್ಟ್ಸ್ ಕರಾಟೆ ಇನ್ಸ್ಟಿಟ್ಯೂಟ್ ಅಧ್ಯಕ್ಷ ಈಶ್ವರ ನಾಯ್ಕ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಗೌರವ ಸಲಹೆಗಾರ ಸುರೇಶ ನಾಯ್ಕ ಮತ್ತು ಕಾನೂನು ಸಲಹೆಗಾರ ಮನೋಜ ನಾಯ್ಕ, ಉಪಾಧ್ಯಕ್ಷ ನಾಗಪ್ಪ ನಾಯ್ಕ ಹಾಗೂ ಸಹಪ್ರಧಾನ ಕಾರ್ಯದರ್ಶಿ ನಾಗಶ್ರೀ ನಾಯ್ಕ ವಿದ್ಯಾರ್ಥಿಗಳಿಗೆ ಸನ್ಮಾನಿಸಿದರು.



