ಭಟ್ಕಳ: ತಾಲೂಕಿನ ಶಿರಾಲಿಯ ಆಳ್ವೆಕೋಡಿ ಸಮೀಪ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಚಿಪ್ಪೆಕಲ್ಲು ತೆಗೆಯಲು ಹೋದ ೮ ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಭೀಕರ ದುರಂತ ನಡೆದಿದೆ (Terrible tragedy).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳ ಡೈರಿ ಫೇಸ್ಬುಕ್ ಪೇಜ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಭಟ್ಕಳ (Bhatkal) ತಾಲೂಕಿನ ಪಡುಶಿರಾಲಿ ಬೆಂಗ್ರೆಯ ಲಕ್ಷ್ಮಿ ಮಹಾದೇವ ನಾಯ್ಕ (42), ಶಾರದಾಹೊಳೆಯವರಾದ ಉಮೇಶ ನಾಯ್ಕ (30), ಲಕ್ಷ್ಮಿ ನಾಯ್ಕ (30), ಲಕ್ಷ್ಮಿ ಅಣ್ಣಪ್ಪ ನಾಯ್ಕ (60), ಲಕ್ಷ್ಮಿ ಶಿವರಾಮ ನಾಯ್ಕ (49), ಜ್ಯೋತಿ ನಾಗಪ್ಪ ನಾಯ್ಕ (34), ಮಾಲತಿ ನಾಯ್ಕ (38), ಮಾಸ್ತಮ್ಮ ನಾಯ್ಕ ಮೃತರು. ಅಳ್ವೆಕೋಡಿಯಲ್ಲಿ ಇವರೆಲ್ಲರ ಮೃತ ದೇಹ ಪತ್ತೆಯಾಗಿದೆ (Terrible tragedy).

Bhatkal/ ಭಟ್ಕಳದ ಇಬ್ಬರಿಗೆ ಆರು ತಿಂಗಳು ಜಿಲ್ಲೆಯಿಂದ ಗಡಿಪಾರು: ಯಾಕೆ ಗೊತ್ತಾ?

‘ಕಪ್ಪೆ ಚಿಪ್ಪು ಆರಿಸಲು ನದಿಗೆ ಇಳಿದಿದ್ದವರು ಪರಸ್ಪರ ಕೈ ಹಿಡಿದು ಸಾಗುತ್ತಿದ್ದರು. ತಡರಾತ್ರಿ ಸುರಿದ ಮಳೆಗೆ ನದಿಯಲ್ಲಿ ನೀರಿನ ಹರಿವು ಹೆಚ್ಚಿತ್ತು. ಜೊತೆಗೆ ಸಮುದ್ರದ ಅಲೆಗಳ ಅಬ್ಬರದಿಂದ ನೀರಿನ ಮಟ್ಟ ಏರಿಕೆಯಾಗಿ, ಮುಳುಗಿರುವ ಶಂಕೆ ಇದೆ. ಘಟನೆಯಲ್ಲಿ ನಾಗರತ್ನಾ ಮತ್ತು ಮಹಾದೇವಿ ಎಂಬುವವರು ಅಪಾಯದಿಂದ ಪಾರಾಗಿದ್ದಾರೆ. ಅವರನ್ನು ಚಿಕಿತ್ಸೆಗೆ ಮಣಿಪಾಲಕ್ಕೆ (Manipal) ಕರೆದೊಯ್ಯಲಾಗಿದೆ. ಇನ್ನೂ ಕೆಲವರು ಕಣ್ಮರೆಯಗಿರುವ ಶಂಕೆ ಇದ್ದು, ಪತ್ತೆ ಕಾರ್ಯ ನಡೆಸಲಾಗುತ್ತಿದೆ’ ಎಂದು ಭಟ್ಕಳ ಠಾಣೆ ಪೊಲೀಸರು ತಿಳಿಸಿದ್ದಾರೆ.

swift action/ ಭಟ್ಕಳ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ 

ಈ ಆಘಾತಕಾರಿ ಸುದ್ದಿ ತಾಲೂಕಿನಾದ್ಯಂತ ಹರಡಿ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಜನ ಜಮಾಯಿಸಿದ್ದಾರೆ. ಸಾರ್ವಜನಿಕ ಸಂಘ-ಸಂಸ್ಥೆಗಳ ಪ್ರಮುಖರು, ರಾಜಕೀಯ ಮುಖಂಡರು ಆಸ್ಪತ್ರೆಗೆ ದೌಡಾಯಿಸಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳುತ್ತಿರುವುದು ಕಂಡು ಬಂತು. ಭಟ್ಕಳ ಸರಕಾರಿ ಆಸ್ಪತ್ರೆಗೆ ಮಾಜಿ ಶಾಸಕ ಸುನಿಲ ನಾಯ್ಕ, ಮಾಜಿ ಪಶ್ಚಿಮ ಘಟ್ಟಗಳ ಅಧ್ಯಕ್ಷ ಗೋವಿಂದ ನಾಯ್ಕ, ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಮುಖಂಡ ದಿನೇಶ ನಾಯ್ಕ ಮುಂಡಳ್ಳಿ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ವೆಂಕಟೇಶ ನಾಯ್ಕ, ಬಿಜೆಪಿ ಮಂಡಲಾಧ್ಯಕ್ಷ ಲಕ್ಷ್ಮೀ ನಾರಾಯಣ ನಾಯ್ಕ, ವಿಶ್ವ ಹಿಂದೂ ಪರಿಷದ್ ಭಜರಂಗದಳ ಮುಖಂಡ ದೀಪಕ ನಾಯ್ಕ, ಹಲವಾರು ಪ್ರಮುಖರು ಆಸ್ಪತ್ರೆಗೆ ದಡಾಯಿಸಿದ್ದಾರೆ.

College student/ ಕಾಲೇಜು ವಿದ್ಯಾರ್ಥಿ ಟೆಲಿಗ್ರಾಂ ಮೂಲಕ ಇತರರ ಮಾಹಿತಿ ಹಂಚಿದ್ದು ಯಾಕೆ?