ಭಟ್ಕಳ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸುದೀರ್ಘ ಸಾರ್ವಜನಿಕ ಸೇವೆಯ ಹಿನ್ನೆಲೆಯಲ್ಲಿ ಬಿಜೆಪಿ (BJP) ಭಟ್ಕಳ ಮಂಡಲದ ವತಿಯಿಂದ ನಗರದ ಚನ್ನಪಟ್ಟಣ ಶ್ರೀ ಹನುಮಂತ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಿಹಿ ಹಂಚುವ ಕಾರ್ಯಕ್ರಮ ನಡೆಯಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಗುಜರಾತ್ (Gujarat) ರಾಜ್ಯದ ಮುಖ್ಯಮಂತ್ರಿಯಾಗಿ ೧೨ ವರ್ಷ ಹಾಗೂ ಭಾರತದ ಪ್ರಧಾನಿಯಾಗಿ (prime minister) ೧೨ ವರ್ಷ ಸೇವೆ ಸಲ್ಲಿಸಿರುವ ಮೋದಿಜಿ ಅವರು ಚುನಾಯಿತ ಸರ್ಕಾರಿ ಮುಖ್ಯಸ್ಥರಾಗಿ ಸುಮಾರು ೨೪ ವರ್ಷಗಳ ಸೇವೆ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ (BJP) ಮುಖಂಡರು ತಿಳಿಸಿದರು. ಮೋದಿಯವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶದ ಅಭಿವೃದ್ಧಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
Auto driver/ ವರಕೊಡ್ಲು ಮೈದಾನದಲ್ಲಿ ಆಟೋ ಚಾಲಕ ಬಂಧನ
ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ ಮಾತನಾಡಿ, ಸಾಮಾನ್ಯ ಕಾರ್ಯಕರ್ತನಾಗಿ ಆರಂಭವಾದ ಮೋದಿಜಿಯವರ ರಾಜಕೀಯ ಪಯಣ ಇಂದು ಜಾಗತಿಕ ನಾಯಕತ್ವದ ಮಟ್ಟಕ್ಕೆ ತಲುಪಿರುವುದು ದೇಶದ ಯುವಕರಿಗೆ ಪ್ರೇರಣೆಯಾಗಿದೆ ಎಂದು ಹೇಳಿದರು.
tribute/ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಡಾ ಆರ್ ವಿ ಸರಾಫಗೆ ನುಡಿನಮನ
ಈ ಸಂದರ್ಭದಲ್ಲಿ ಮಾಜಿ ಶಾಸಕ ಸುನೀಲ ಬಿ ನಾಯ್ಕ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಪಕ್ಷದ ಪ್ರಮುಖ ಕೇದಾರ ಕೊಲ್ಲೆ, ಮಂಡಲ ಉಪಾಧ್ಯಕ್ಷ ಮಂಜಪ್ಪ ನಾಯ್ಕ, ಮಂಡಲ ಕಾರ್ಯದರ್ಶಿ ರಾಘವೇಂದ್ರ ನಾಯ್ಕ, ಯುವ ಮೋರ್ಚಾ ಅಧ್ಯಕ್ಷ ಸುನೀಲ ಕಾಮತ, ಸಾಮಾಜಿಕ ಜಾಲತಾಣ ಸಂಚಾಲಕ ಪಾಂಡುರಂಗ ನಾಯ್ಕ, ಸಂಘಟನೆ ಪ್ರಮುಖ ಜಯಂತ ನಾಯ್ಕ ಸೇರಿದಂತೆ ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.



