ಭಟ್ಕಳ: ಪೊಲೀಸ್ ಠಾಣೆ (police station) ಎದುರು ನಡೆದ ಪ್ರತಿಭಟನೆ (protest) ವೇಳೆ ಪ್ರಚೋದನಕಾರಿ ಹಾಗೂ ಅವಾಚ್ಯ ಪದಗಳನ್ನು ಬಳಸಿ ಭಾಷಣ ಮಾಡಿದ್ದ ಆರೋಪದ ಮೇಲೆ ಬಿಜೆಪಿ (BJP) ಮುಖಂಡ ಗೋವಿಂದ ನಾಯ್ಕ ವಿರುದ್ಧ ಭಟ್ಕಳ (Bhatkal) ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (Case registered).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ದೂರು ದಾಖಲಾದ ಸುದ್ದಿ ತಾಲೂಕಿನ ಅತ್ಯಂತ ವ್ಯಾಪಕವಾಗಿ ಹಬ್ಬಿ, ಗೋವಿಂದ ನಾಯ್ಕ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲಿ “I Stend Wi Govind Naik” ಎನ್ನುವ ಶೀರ್ಷಿಕೆಯ ವಾಟ್ಸಾಪ್ ಸ್ಟೇಟಸ್ ನಲ್ಲಿ ರಾರಾಜಿಸುತ್ತಿದೆ.
Appeal/ ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಕಾರ್ಮಿಕ ನಿರೀಕ್ಷಕರಿಗೆ ಮನವಿ
ಸಾಗರ ರಸ್ತೆ (Sagar Road) ಕಸ ವಿಲೇವಾರಿ ಘಟಕದ ಸಮೀಪ ನಡೆದ ಘಟನೆಯ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ ಮತ್ತು ಹಿಂದೂ ಕಾರ್ಯಕರ್ತ (Hindu activist) ಕುಮಾರ ನಾಯ್ಕ ವಿರುದ್ಧ ಪ್ರಕರಣ ದಾಖಲಾಗಿತ್ತು (Case registered). ಈ ಕ್ರಮವನ್ನು ವಿರೋಧಿಸಿ ಕಾರ್ಯಕರ್ತರು ಭಟ್ಕಳ ಶಹರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.
Case registered/ ಯುವತಿಯ ಕಾರಿನಲ್ಲಿ ಕರೆದೊಯ್ದ ಯುವಕನ ವಿರುದ್ಧ ಪ್ರಕರಣ ದಾಖಲು
ಪ್ರತಿಭಟನೆಯ ವೇಳೆ ಗೋವಿಂದ ನಾಯ್ಕ ಮಾತನಾಡಿ, ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ಟೀಕಿಸುವುದರ ಜೊತೆಗೆ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಸಾಧ್ಯತೆ ಇರುವ ಹೇಳಿಕೆಗಳನ್ನು ನೀಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಭಾಷಣದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ, ಭಟ್ಕಳದಂತಹ ಸೂಕ್ಷ್ಮ ಪ್ರದೇಶದಲ್ಲಿ ಎರಡು ಸಮುದಾಯಗಳ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
Complaint/ ಹಿಂದು ಯುವತಿಯೊಂದಿಗೆ ಮುಸ್ಲಿಂ ಯುವಕ; ತಡೆದ ಹಿಂದೂ ಕಾರ್ಯಕರ್ತರ ಮೇಲೆ ದೂರು
ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯ ಪಿಐ ವೆಂಕಟೇಶ ಮುರನಾಳ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Bhatkal man dies/ ದುಬೈನಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಭಟ್ಕಳದ ಯುವಕ ಸಾವು



