ಭಟ್ಕಳ: ಪತ್ರಿಕಾ ದಿನಾಚರಣೆಯ (Press Day Celebration) ಅಂಗವಾಗಿ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಭಟ್ಕಳ ತಾಲೂಕು ಘಟಕವು ಭಾನುವಾರ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿ, ಪೊಲೀಸ್ ಇಲಾಖೆ ಮತ್ತು ಮಾಧ್ಯಮಗಳ ನಡುವಿನ ಪರಸ್ಪರ ಸಹಕಾರ, ವಿಶ್ವಾಸ ಹಾಗೂ ಸಾಮಾಜಿಕ ಜವಾಬ್ದಾರಿಯ ಮಹತ್ವವನ್ನು ಒತ್ತಿಹೇಳಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ರಾಜ್ಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ ಭಟ್ಕಳ ನಗರ ಪೊಲೀಸ್ ಠಾಣೆಯ ಪಿಎಸ್ಐ (PSI) ನವೀನ್ ನಾಯ್ಕ ಅವರನ್ನು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಹಾಗೂ ಡಿಜಿ–ಐಜಿಪಿ ಪ್ರಶಸ್ತಿ ಪದಕಕ್ಕೆ ಭಾಜನರಾದ ಹೆಡ್ ಕಾನ್ಸ್ಟೇಬಲ್ ದೀಪಕ ನಾಯ್ಕ ಅವರನ್ನು ಸಂಘದ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಇದೇ ವೇಳೆ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಸೇರಿದಂತೆ ಸಂಘದ ಸದಸ್ಯರಾದ ಮಂಜುನಾಥ ಮೊಗೇರ, ದಯಾನಂದ ನಾಯ್ಕ, ಗಣೇಶ್ ನಾಯ್ಕ ಮತ್ತು ಯಶಶ್ರೀ ಆರ್ ಭಟ್ ಅವರನ್ನೂ ಸನ್ಮಾನಿಸಲಾಯಿತು.
Case registered/ ಕಾರಿಗೆ ಡಿಕ್ಕಿ ಹೊಡೆದ ಯುವಕನ ವಿರುದ್ಧ ಕೇಸು ದಾಖಲು
ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿದ ಭಟ್ಕಳ (Bhatkal) ಡಿವೈಎಸ್ಪಿ (DySP) ಬಿ. ಗಿರೀಶ್, ಸಮಾಜದ ಹಿತದೃಷ್ಟಿಯಿಂದ ಪೊಲೀಸ್ ಇಲಾಖೆ ಮತ್ತು ಪತ್ರಕರ್ತರ ನಡುವಿನ ಉತ್ತಮ ಬಾಂಧವ್ಯ ಅತ್ಯಂತ ಅಗತ್ಯ ಎಂದು ಹೇಳಿದರು. ಭಟ್ಕಳ ಶಹರ ಠಾಣೆಯ ಪಿಐ (PI) ದಿವಾಕರ್ ಮಾತನಾಡಿ, ಸಮಾಜದ ಒಳಿತಿಗಾಗಿ ಪೊಲೀಸ್ ಇಲಾಖೆ ಹಾಗೂ ಮಾಧ್ಯಮಗಳು ಜವಾಬ್ದಾರಿಯುತವಾಗಿ ಕೈಜೋಡಿಸಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ತಿಳಿಸಿದರು. ಸನ್ಮಾನ ಸ್ವೀಕರಿಸಿದ ಪಿಎಸ್ಐ (PSI) ನವೀನ್ ನಾಯ್ಕ ಮತ್ತು ಹೆಡ್ ಕಾನ್ಸ್ಟೇಬಲ್ ದೀಪಕ ನಾಯ್ಕ, ತಮ್ಮ ಸೇವೆಯನ್ನು ಗುರುತಿಸಿ ಗೌರವಿಸಿದ ಸಂಘಟನೆಗೆ ಕೃತಜ್ಞತೆ ಸಲ್ಲಿಸಿದರು.
judicial custody/ ಭಟ್ಕಳದಲ್ಲಿ ಇಬ್ಬರಿಗೆ ನ್ಯಾಯಾಂಗ ಬಂಧನ
ಸಂಘದ ಖಜಾಂಚಿ ಅರ್ಜುನ್ ಮಲ್ಯ ಸ್ವಾಗತಿಸಿದರು. ಕರಾವಳಿ ಕರ್ನಾಟಕ ವಲಯದ ಅಧ್ಯಕ್ಷ ಕುಮಾರ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಪತ್ರಿಕಾ ದಿನಾಚರಣೆಯ (Press Day Celebration) ಮಹತ್ವ ಹಾಗೂ ಸಂಘದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಭಟ್ಕಳ ತಾಲೂಕು ಘಟಕದ ಅಧ್ಯಕ್ಷ ನಸಿಮುಲ್ಲಾ ಘನಿ ನೇತೃತ್ವ ವಹಿಸಿದ್ದರು.
arrest/ ಭಟ್ಕಳ ಪೊಲೀಸರಿಂದ ಮಂಕಿ ಠಾಣೆಯ ಪಿಎಸೈ ಬಂಧನ ಯಾಕೆ ಗೊತ್ತಾ?
ಸಂಘದ ಕಾರ್ಯದರ್ಶಿ ಉಲ್ಲಾಸ್ , ಸದಸ್ಯರಾದ ಮೊಹಮ್ಮದ್ ಅಶ್ರಫ್ ಎಂ., ಗುರುಪ್ರಸಾದ್, ಪತ್ರಕರ್ತರು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪತ್ರಕರ್ತರು ಮತ್ತು ಪೊಲೀಸ್ ಇಲಾಖೆಯ ನಡುವಿನ ಸಹಕಾರ, ಪರಸ್ಪರ ಗೌರವ ಹಾಗೂ ಸಾಮಾಜಿಕ ಬದ್ಧತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಗಮನ ಸೆಳೆಯಿತು.
Memorandum/ ಅನುದಾನಿತ ಶಾಲೆಗಳ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಮನವಿ

