ಕುಂದಾಪುರ: ಮುಖಾಮುಖಿ ಡಿಕ್ಕಿಯಲ್ಲಿ (Road accident) ಒಂದು ಬೈಕಿನ ಸವಾರ ಸಾವನ್ನಪ್ಪಿದರೆ, ಸ್ಕೂಟರಿನಲ್ಲಿದ್ದ ಸವಾರ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಸ್ಕೂಟರ್ ಹಿಂಬದಿ ಸವಾರೆ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಸೋಮವಾರ ಮಧ್ಯಾಹ್ನ ಕುಂದಾಪುರ (Kundapura) ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣಾ ತ್ರಾಸಿ ಬೀಚ್ (Trasi beach) ಅರಮ ದೇವಸ್ಥಾನದ ಎದುರು ರಾಷ್ಟ್ರೀಯ ಹೆದ್ದಾರಿ (National Highway) ೬೬ರಲ್ಲಿ ಈ ಘಟನೆ ನಡೆದಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಸಾವನ್ನಪ್ಪಿದ ಬೈಕ್ ಸವಾರನನ್ನು ಭಟ್ಕಳದ (Bhatkal) ಸಣಬಾವಿ ಸಾತುಮನೆ ನಿವಾಸಿ ದೀಪಕ ನಾಗಪ್ಪ ನಾಯ್ಕ (೨೩) ಎಂದು ಗುರುತಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ದೀಪಕ ನಾಗಪ್ಪ ನಾಯ್ಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ತೀವ್ರವಾಗಿ ಗಾಯಗೊಂಡಿದ್ದ ಹಡವು ನಿವಾಸಿ ಪೆದ್ರು ವಾಝ್ ಎಂಬುವರ ಮಗ ಪ್ಯಾಟ್ರಿಕ್ ವಾಸ್ (೬೩) ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಪ್ಯಾಟ್ರಿಕ್ ವಾಸ್ ಅವರ ಮಗಳು ಮಿಸ್ ಪ್ಲೆನ್ಸಿಟಾ (೨೪) ಚಿಕಿತ್ಸೆ ಪಡೆಯುತ್ತಿದ್ದಾರೆ.

Commando/ ೧೭ ವರ್ಷ ದೇಶಸೇವೆ ಬಳಿಕ ತವರಿಗೆ ಕಮಾಂಡೋ ವಾಪಸ್: ಯಾರಿವರು ಗೊತ್ತಾ?

ತ್ರಾಸಿ ಬೀಚ್‌ನ ರಾಷ್ಟ್ರೀಯ ಹೆದ್ದಾರಿ ೬೬ರ ಪೂರ್ವ ಬದಿಯ ರಸ್ತೆಯಲ್ಲಿ ಅಂದರೆ ಬೈಂದೂರು (byndoor) ಕಡೆಯಿಂದ ಕುಂದಾಪುರ ಕಡೆಗಿನ ಏಕಮುಖ ರಸ್ತೆಯಲ್ಲಿ ಬೈಕನ್ನು ದೀಪಕ ನಾಗಪ್ಪ ನಾಯ್ಕರ ಸವಾರಿ ಮಾಡಿಕೊಂಡು ಹೋಗುತ್ತಿರುವಾಗ ಅದೇ ರಾಷ್ಟ್ರೀಯ ಹೆದ್ದಾರಿ ೬೬ರ ಪೂರ್ವ ಬದಿಯ ಏಕಮುಖ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಅಂದರೆ ತ್ರಾಸಿ ಕಡೆಯಿಂದ ಮರವಂತೆ ಕಡೆಗೆ ಸ್ಕೂಟರ್‌ ಸವಾರ ಪೆಟ್ರೀಕ್‌ ವಾಸ್ ‌ಮಗಳು ಪ್ಲೇನ್ಸೀಟಾ ಅವರನ್ನು ಸಹಸವಾರಳನ್ನಾಗಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿತ್ತು. ಡಿಕ್ಕಿಯ ತೀವ್ರತೆಗೆ ಇಬ್ಬರೂ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದು, ದೀಪಕ ಅವರ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿದ್ದವು. ಸ್ಕೂಟರ್ ಸವಾರ ಪೆಟ್ರಿಕ್ ವಾಜ್ ಹಾಗೂ ಅವರ ಹಿಂಬದಿ ಸವಾರರಾಗಿದ್ದ ಪ್ಲೇನ್ಸೀಟಾ ಅವರಿಗೂ ತೀವ್ರ ಗಾಯಗಳಾಗಿದ್ದವು.

Health Minister/ ಬಾರದ ಆರೋಗ್ಯ ಸಚಿವ: ಭಟ್ಕಳ ಜನರ ನಿರೀಕ್ಷೆ ಹುಸಿ

ಅಪಘಾತ (Road accident) ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಟೀಮ್ ಎಂ ಎಚ್ ಐ ಗಂಗೊಳ್ಳಿ ತುರ್ತು ಸ್ಪಂದನಾ ತಂಡದ ಆಂಬುಲೆನ್ಸ್ ಚಾಲಕ ಇಬ್ರಾಹಿಂ ಗಂಗೊಳ್ಳಿ ಹಾಗೂ ತಂಡ ಗಾಯಗೊಂಡ ಮೂವರನ್ನೂ ಕುಂದಾಪುರ ಆಸ್ಪತ್ರೆಗೆ ಕೊಂಡೊಯ್ದು ಬಳಿಕ ಮೃತ ಯುವಕನ ವಿಳಾಸವನ್ನು ಪತ್ತೆ ಹಚ್ಚಿ ವಾರಸುದಾರರಿಗೆ ವಿಷಯ ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತ್ರಾಸಿ ಬೀಚ್‌ನಲ್ಲಿ ಕರ್ತವ್ಯದಲ್ಲಿದ್ದ ಗೃಹರಕ್ಷಕ ದಳದ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Press Day/ ಭಟ್ಕಳದಲ್ಲಿ ಪತ್ರಿಕಾ ದಿನಾಚರಣೆ: ಸಾಧಕ ಪೊಲೀಸರಿಗೆ ಸನ್ಮಾನ