ಭಟ್ಕಳ: ವೈದ್ಯರ ಕೊರತೆ, ತಜ್ಞ ವೈದ್ಯರ ಖಾಲಿ ಹುದ್ದೆಗಳು, ಎಕ್ಸರೇ ಯಂತ್ರಗಳ ಪದೇಪದೇ ದುರಸ್ತಿ, ಅಗತ್ಯ ಔಷಧಗಳ ಕೊರತೆ ಸೇರಿದಂತೆ ಹಲವು ಸಮಸ್ಯೆಗಳಿಂದ ಬಳಲುತ್ತಿರುವ ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯ (Bhatkal Government Hospital) ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವಂತೆ ಸ್ಥಳೀಯ ಆಟೋ ಚಾಲಕರು ಹಾಗೂ ಸಾರ್ವಜನಿಕರು ಆರೋಗ್ಯ ಸಚಿವ ಯು ಟಿ ಖಾದರ್ ಅವರಿಗೆ ಮನವಿ ಸಲ್ಲಿಸಿದರು (Appeal to Health Minister).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಕುಮಟಾದಲ್ಲಿ (Kumta) ಸರ್ಕಾರಿ ಆಸ್ಪತ್ರೆ ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ (Mangaluru( ತೆರಳುವ ವೇಳೆ ಭಟ್ಕಳದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿದ ಸಚಿವರಿಗೆ ಆಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲಾಯಿತು (Appeal to Health Minister). ನಗರಸಭೆಯಾಗಿ ಮೇಲ್ದರ್ಜೆಗೇರಿರುವ ಭಟ್ಕಳದಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದ್ದರೂ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ವೈದ್ಯರು ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಬಡ ರೋಗಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
Murudeshwar Bus Stand/ ಅವ್ಯವಸ್ಥೆಯ ತಾಣ ಮುರ್ಡೇಶ್ವರ ಬಸ್ ನಿಲ್ದಾಣ
ವಿಶೇಷ ಚಿಕಿತ್ಸೆಗೆ ಕುಂದಾಪುರ (Kundapura) ಅಥವಾ ಮಂಗಳೂರಿಗೆ (Mangaluru) ತೆರಳಬೇಕಾದ ಅನಿವಾರ್ಯತೆ ಎದುರಾಗುತ್ತಿದೆ. ಕಳೆದ ಎರಡೂವರೆ ವರ್ಷಗಳಿಂದ ಸ್ತ್ರೀರೋಗ ತಜ್ಞರ ಹುದ್ದೆ ಖಾಲಿ ಇರುವುದರಿಂದ ಗರ್ಭಿಣಿಯರು ಹಾಗೂ ಮಹಿಳೆಯರು ಖಾಸಗಿ ಆಸ್ಪತ್ರೆಗಳಿಗೆ ಮೊರೆ ಹೋಗಬೇಕಾಗಿದೆ. ರಾತ್ರಿಪಾಳಿ ಮತ್ತು ಸರ್ಕಾರಿ ರಜೆ ದಿನಗಳಲ್ಲಿ ಅನುಭವಿ ವೈದ್ಯರು ಲಭ್ಯವಿಲ್ಲದೆ, ತರಬೇತಿ ವೈದ್ಯರು ಮಾತ್ರ ರೋಗಿಗಳನ್ನು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗಳಿಗೆ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿದರು.
CCTV surveillance/ ಬಿಳಲಖಂಡದಲ್ಲಿ ಕಸ ಎಸೆಯುವವರ ಮೇಲೆ ಸಿಸಿ ಕ್ಯಾಮೆರಾ ಕಣ್ಗಾವಲು
ಆಸ್ಪತ್ರೆಯ ಎಕ್ಸರೇ ಯಂತ್ರಗಳು ಪದೇಪದೇ ದುರಸ್ತಿಗೊಳಗಾಗುತ್ತಿರುವುದು ಹಾಗೂ ಅಗತ್ಯ ಔಷಧಗಳ ಕೊರತೆಯಿಂದ ರೋಗಿಗಳು ಖಾಸಗಿ ಆಸ್ಪತ್ರೆ ಮತ್ತು ಔಷಧ ಅಂಗಡಿಗಳ ಮೇಲೆ ಅವಲಂಬಿತರಾಗಿದ್ದಾರೆ. ಅಗತ್ಯ ವೈದ್ಯರ ನೇಮಕ, ಸಿಬ್ಬಂದಿ ಭರ್ತಿ, ಎಕ್ಸರೇ ಯಂತ್ರಗಳ ಸಮರ್ಪಕ ನಿರ್ವಹಣೆ ಮತ್ತು ಔಷಧಗಳ ನಿರಂತರ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದರು. ಈ ಕುರಿತು ಈ ಹಿಂದೆಯೇ ಸಂಬಂಧಿತ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸಮಸ್ಯೆಗಳು ಮುಂದುವರಿದಿವೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು.
ಮನವಿಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಯು ಟಿ ಖಾದರ್ (U T Khadar), ಆಸ್ಪತ್ರೆಯಲ್ಲಿನ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಸೇರಿದಂತೆ ಸಾರ್ವಜನಿಕರು ಪ್ರಸ್ತಾಪಿಸಿದ ಎಲ್ಲ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ, ಆದಷ್ಟು ಬೇಗ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬಿಸಿಸಿ ಅಧ್ಯಕ್ಷ ವೆಂಕಟೇಶ ನಾಯ್ಕ ಹಾಗೂ ಪರಮೇಶ್ವರ ನಾಯ್ಕ, ಶಂಕರ ನಾಯ್ಕ, ಅಪು ನಾಯ್ಕ (ಜಾಲಿ), ಮಾದೇವ ನಾಯ್ಕ ಸೇರಿದಂತೆ ಸ್ಥಳೀಯ ಆಟೋ ಚಾಲಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Jan Dhan Yojana/ ಜನಧನ ಯೋಜನೆ ಸಾಲದ ಆಮಿಷಕ್ಕೆ ₹೬೮.೫೮ ಲಕ್ಷ ಕಳಕೊಂಡ ಭಟ್ಕಳದ ಮಹಿಳೆ


