ಭಟ್ಕಳ: ಶಾಲಾ ವಾಹನಗಳ (school vehicles) ಬೇಕಾಬಿಟ್ಟಿ ಸಂಚಾರ ಹಾಗೂ ವಾಹನ ನಿಯಮ ಉಲ್ಲಂಘನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಟ್ಕಳ ನಗರ (Bhatkal town) ಪೊಲೀಸ್ ಠಾಣೆ (police station) ವ್ಯಾಪ್ತಿಯಲ್ಲಿ ಶಾಲಾ ವಾಹನಗಳ (school vehicles) ವಿರುದ್ಧ ವಿಶೇಷ ತಪಾಸಣೆ ನಡೆಸಿ ನಿಯಮ ಉಲ್ಲಂಘಿಸಿದ ವಾಹನಗಳಿಗೆ ದಂಡ (fine) ವಿಧಿಸಲಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಭಟ್ಕಳ ನಗರ ಠಾಣೆ ವ್ಯಾಪ್ತಿಯಲ್ಲಿ ಪಿಎಸ್ಐ ನವೀನ್ ನಾಯ್ಕ ಹಾಗೂ ಪಿಎಸ್ಐ ತಿಮ್ಮಪ್ಪ ಎಸ್ ಅವರ ನೇತೃತ್ವದಲ್ಲಿ ಗುರುವಾರ ವಿಶೇಷ ಕಾರ್ಯಾಚರಣೆ ನಡೆಸಿ ನಗರದ ವಿವಿಧ ಶಾಲಾ ವಾಹನಗಳನ್ನು ತಡೆದು ಪರಿಶೀಲಿಸಲಾಯಿತು. ತಪಾಸಣೆ ವೇಳೆ ಇನ್ಸುರೆನ್ಸ್ ಸೇರಿದಂತೆ ಅಗತ್ಯ ದಾಖಲೆಗಳು ಸಮರ್ಪಕವಾಗಿ ಇಲ್ಲದಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಒಟ್ಟು ಐದು ಶಾಲಾ ವಾಹನಗಳಿಗೆ ದಂಡ ವಿಧಿಸಲಾಯಿತು.
Poultry Waste Disposal/ ಗ್ರಾಮಸ್ಥರ ಕೈಗೆ ಸಿಕ್ಕ ಕೋಳಿ ತ್ಯಾಜ್ಯ ವಾಹನ


