ಭಟ್ಕಳ: ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುತ್ತಿದ್ದ (rowdy activities) ಆರೋಪದ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ (Bhatkal rural) ಪೊಲೀಸ್ ಠಾಣೆ (police station) ವ್ಯಾಪ್ತಿಯ ಹೆಬಳೆ ಗಾಂಧಿನಗರ ನಿವಾಸಿ ಜಗದೀಶ ವಾಸು ಮೊಗೇರ (೩೩) ಅವರನ್ನು ಉತ್ತರ ಕನ್ನಡ (Uttara Kannada) ಜಿಲ್ಲೆಯಿಂದ ಮೈಸೂರು (Mysuru) ನಗರದ ಅಶೋಕಪುರಂ ಪೊಲೀಸ್ ಠಾಣೆ ವ್ಯಾಪ್ತಿಗೆ ೬ ತಿಂಗಳ ಕಾಲ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಜಗದೀಶ ಮೊಗೇರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬಲವಂತ, ಹಲ್ಲೆ, ಕೊಲೆ ಯತ್ನ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ೫ ಮತ್ತು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಸೇರಿದಂತೆ ಒಟ್ಟೂ ೬ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಎಲ್ಲ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

clash/ ಬಡಿದಾಡಿಕೊಂಡ ಮಾವ-ಅಳಿಯ

ಆರೋಪಿ ತನ್ನ ಸಹಚರರೊಂದಿಗೆ ಗೂಂಡಾ ಚಟುವಟಿಕೆಗಳಲ್ಲಿ (rowdy activities) ತೊಡಗುವುದು, ಜನರಿಗೆ ಬೆದರಿಕೆ ಹಾಕುವುದು, ಕ್ಷುಲ್ಲಕ ವಿಚಾರಗಳಿಗೂ ಹಲ್ಲೆ ನಡೆಸುವುದು ಹಾಗೂ ಪ್ರಕರಣಗಳ ಸಾಕ್ಷಿದಾರರಿಗೆ ಬೆದರಿಕೆ ಒಡ್ಡುವ ಮೂಲಕ ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟು ಮಾಡುತ್ತಿದ್ದಾನೆಂದು ಪೊಲೀಸ್ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಠಾಣೆ ಪೊಲೀಸ್ ನಿರೀಕ್ಷಕರು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಗಡಿಪಾರು ಪ್ರಸ್ತಾವನೆ ಸಲ್ಲಿಸಿದ್ದರು.

Mobile phone seized/ ಫೇಸ್‌ಬುಕ್ ಖಾತೆ ತೆರೆದ ‘ಈ’ ಶಿಲ್ಪಿಗೆ ಪೊಲೀಸ್ ಆತಿಥ್ಯ, ಯಾಕೆ ಗೊತ್ತಾ?