ಕಾರವಾರ: ಸಂವಿಧಾನಾತ್ಮಕ ಹಾಗೂ ಕಾನೂನುಬದ್ಧ ಹಕ್ಕುಗಳ ರಕ್ಷಣೆ ಮತ್ತು ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಂದಾಯ ಇಲಾಖೆ (revenue department) ಗ್ರಾಮ ಸಹಾಯಕರ (village assistants) ಸಂಘದ ವತಿಯಿಂದ ಆ ೨೪ರಿಂದ ಬೆಂಗಳೂರಿನ (Bengaluru) ಸ್ವಾತಂತ್ರ್ಯ ಉದ್ಯಾನವನದಲ್ಲಿ (freedom park) ಅನಿರ್ದಿಷ್ಟಾವಧಿ ಧರಣಿ–ಮುಷ್ಕರ ಹಮ್ಮಿಕೊಳ್ಳಲಾಗಿದೆ. ರಾಜ್ಯ ಸಂಘದ ಅಧ್ಯಕ್ಷರ ಕರೆಯ ಮೇರೆಗೆ ನಡೆಯಲಿರುವ ಧರಣಿ–ಮುಷ್ಕರದಲ್ಲಿ ಉತ್ತರ ಕನ್ನಡ (Uttara Kannada) ಜಿಲ್ಲೆಯ ಗ್ರಾಮ ಸಹಾಯಕರು (village assistants) ಭಾಗವಹಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಧರಣಿಯಲ್ಲಿ ಪಾಲ್ಗೊಳ್ಳಲು ಜಿಲ್ಲೆಯ ಗ್ರಾಮ ಸಹಾಯಕರಿಗೆ ಕೇಂದ್ರಸ್ಥಾನದಿಂದ ಹೊರಡಲು ಅನುಮತಿ ನೀಡುವಂತೆ ಉತ್ತರ ಕನ್ನಡ ಜಿಲ್ಲಾ ಗ್ರಾಮ ಸಹಾಯಕರ ಸಂಘದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ (request).

garbage/ ಭಟ್ಕಳ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ತ್ಯಾಜ್ಯದ ರಾಶಿ: ಸಾರ್ವಜನಿಕರ ಆಕ್ರೋಶ

ಕಂದಾಯ ಇಲಾಖೆಯ (revenue department) ಗ್ರಾಮ ಸಹಾಯಕರು ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಇಲಾಖೆಯ ಕಾರ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ತಮ್ಮ ವಿವಿಧ ಬೇಡಿಕೆಗಳು ಈಡೇರಿಲ್ಲ. ಹೀಗಾಗಿ ಸರ್ಕಾರದ ಗಮನ ಸೆಳೆಯಲು ರಾಜ್ಯ ಸಂಘದ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

Editorial/ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರ ಜೀವಕ್ಕಿಲ್ಲವೇ ಬೆಲೆ?

ಈ ವೇಳೆ ರಾಜ್ಯ ಸಂಘದಿಂದ ನೀಡಲಾಗಿರುವ ಕರಪತ್ರ ಹಾಗೂ ಸರ್ಕಾರಕ್ಕೆ ಸಲ್ಲಿಸಿರುವ ಬೇಡಿಕೆಗಳ ಮನವಿ ಪತ್ರದ ಪ್ರತಿಗಳನ್ನೂ ಅಧಿಕಾರಿಗಳಿಗೆ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಅನುಪಸ್ಥಿತಿಯಲ್ಲಿ ತಹಶೀಲ್ದಾರ್ ಪ್ರಮೋದ ನಾಯ್ಕ ಮನವಿ ಸ್ವೀಕರಿಸಿದರು. ಗ್ರಾಮ ಸಹಾಯಕರ ಹಕ್ಕು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ಜಿಲ್ಲೆಯ ಗ್ರಾಮ ಸಹಾಯಕರು ಒಗ್ಗಟ್ಟಿನಿಂದ ಬೆಂಬಲ ನೀಡಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಸಂಘದ ಮಾಸ್ತಯ್ಯ ನಾಯ್ಕ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮ ಸಹಾಯಕರಾದ ದೇವೇಂದ್ರ ನಾಯ್ಕ ಶಿರಸಿ, ಸತೀಶ ನಾಯ್ಕ ಹೊನ್ನಾವರ, ಹರ್ಷ ನಾಯ್ಕ ಉಪಸ್ಥಿತರಿದ್ದರು.

pothole/ ಮಣ್ಕುಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಯ್ದೆರೆದ ಹೊಂಡ