ಭಟ್ಕಳ: ನಗರದ ರೈಲ್ವೆ ನಿಲ್ದಾಣಕ್ಕೆ (railway station) ತೆರಳುವ ರಸ್ತೆಯಲ್ಲಿ ತ್ಯಾಜ್ಯದ ರಾಶಿ (garbage) ಬಿದ್ದಿರುವ ಕುರಿತು ‘ಭಟ್ಕಳ ಡೈರಿ’ ಪ್ರಕಟಿಸಿದ್ದ ವರದಿಗೆ ಫಲಶ್ರುತಿ (Impact) ದೊರೆತಿದೆ. ವರದಿ ಪ್ರಕಟಗೊಂಡ ಬೆನ್ನಲ್ಲೇ ಭಟ್ಕಳ ನಗರಸಭೆ (Bhatkal City Council) ತ್ಯಾಜ್ಯವನ್ನು ತೆರವುಗೊಳಿಸಿ, ಸ್ಥಳವನ್ನು ಸ್ವಚ್ಛಗೊಳಿಸಿದೆ.

garbage/ ಭಟ್ಕಳ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ತ್ಯಾಜ್ಯದ ರಾಶಿ: ಸಾರ್ವಜನಿಕರ ಆಕ್ರೋಶ

‘ಭಟ್ಕಳ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ತ್ಯಾಜ್ಯದ ರಾಶಿ: ಸಾರ್ವಜನಿಕರ ಆಕ್ರೋಶ’ ಎಂಬ ಶೀರ್ಷಿಕೆಯಡಿ ‘ಭಟ್ಕಳ ಡೈರಿ’ ಗುರುವಾರ ಮಧ್ಯಾಹ್ನ ವರದಿ ಪ್ರಕಟಿಸಿತ್ತು. ರೈಲ್ವೆ ನಿಲ್ದಾಣಕ್ಕೆ ತೆರಳುವ ಪ್ರಮುಖ ರಸ್ತೆಯಲ್ಲಿಯೇ ತ್ಯಾಜ್ಯ ರಾಶಿ ಬಿದ್ದಿರುವುದರಿಂದ ಸಾರ್ವಜನಿಕರು ಎದುರಿಸುತ್ತಿದ್ದ ಸಮಸ್ಯೆ ಹಾಗೂ ಸ್ವಚ್ಛತೆ ಕೊರತೆಯಿಂದ ಉಂಟಾಗುತ್ತಿದ್ದ ಅನಾನುಕೂಲತೆ ಕುರಿತು ವರದಿಯಲ್ಲಿ ಬೆಳಕು ಚೆಲ್ಲಲಾಗಿತ್ತು. ಅಲ್ಲದೆ, ರಸ್ತೆಯಲ್ಲಿ ಬಿದ್ದಿದ್ದ ತ್ಯಾಜ್ಯದಿಂದಾಗಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು, ಬೈಕ್ ಸವಾರರ ಮೇಲೆ ನಾಯಿಗಳು ದಾಳಿ ನಡೆಸಿದ ಘಟನೆಗಳೂ ನಡೆದಿದ್ದವು. ಓರ್ವ ಬಾಲಕನ ಮೇಲೂ ನಾಯಿ ದಾಳಿ ನಡೆಸಿದ ಘಟನೆ ನಡೆದಿರುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

Impact/ ‘ಭಟ್ಕಳ ಡೈರಿ’ ವರದಿ ಫಲಶ್ರುತಿ: ವರದಿ ಬೆನ್ನಲ್ಲೇ ತ್ಯಾಜ್ಯ ತೆರವು

ವರದಿಯ ಬೆನ್ನಲ್ಲೇ ನಗರಸಭೆ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಸ್ಥಳಕ್ಕೆ ಗಮನ ಹರಿಸಿ, ಅಲ್ಲಿದ್ದ ತ್ಯಾಜ್ಯವನ್ನು ತೆರವುಗೊಳಿಸಿ ರಸ್ತೆಯನ್ನು ಸ್ವಚ್ಛಗೊಳಿಸಿದ್ದಾರೆ (Impact). ನಗರಸಭೆಯ ಈ ಕಾರ್ಯಕ್ಕೆ ಸ್ಥಳೀಯರಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ಸಾರ್ವಜನಿಕ ಸಮಸ್ಯೆಯನ್ನು ಬೆಳಕಿಗೆ ತಂದು, ಸಂಬಂಧಪಟ್ಟ ಇಲಾಖೆಯ ಗಮನ ಸೆಳೆದ ‘ಭಟ್ಕಳ ಡೈರಿ’ ವರದಿಗೂ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.

garbage/ ಭಟ್ಕಳ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ತ್ಯಾಜ್ಯದ ರಾಶಿ: ಸಾರ್ವಜನಿಕರ ಆಕ್ರೋಶ

ಇದೇ ವೇಳೆ, ಮುಂದೆ ಈ ಸ್ಥಳದಲ್ಲಿ ತ್ಯಾಜ್ಯ ಎಸೆಯುವುದನ್ನು ತಡೆಯಲು ಹಾಗೂ ತಪ್ಪಿತಸ್ಥರನ್ನು ಪತ್ತೆಹಚ್ಚಲು ಸಿಸಿ ಕ್ಯಾಮೆರಾ (CC camera) ಅಳವಡಿಸಬೇಕು ಎಂದು ಸ್ಥಳೀಯರು ನಗರಸಭೆಗೆ ಮನವಿ ಮಾಡಿದ್ದಾರೆ. ತ್ಯಾಜ್ಯ ತೆರವುಗೊಳಿಸುವುದರ ಜೊತೆಗೆ, ಮತ್ತೆ ಅದೇ ಸ್ಥಳದಲ್ಲಿ ತ್ಯಾಜ್ಯ ಸಂಗ್ರಹವಾಗದಂತೆ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

Fishermen/ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರ ಜೀವಕ್ಕಿಲ್ಲವೇ ಬೆಲೆ?