ಭಟ್ಕಳ ಡೈರಿ ವರದಿ
ಕಾರವಾರ: ರಾಜ್ಯ ಕಾಂಗ್ರೆಸ್ ಸರ್ಕಾರದ (Congress government) ವಿರುದ್ಧ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ ನಾಗೇಂದ್ರ (minister B Nagendra) ಅವರ ರಾಜೀನಾಮೆಗೆ ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ (BJP) ಉತ್ತರ ಕನ್ನಡ (Uttara Kannada) ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡ ಸರಣಿ ಹೋರಾಟದಲ್ಲಿ ಹೊನ್ನಾವರ ಬಿಜೆಪಿ (Honnavar BJP) ಬೆಂಬಲ ವ್ಯಕ್ತಪಡಿಸಿತು.
passes away/ ಸಮಾಜ ಸೇವಕ, ಶಿಕ್ಷಣ ಪ್ರೇಮಿ ರವಿ ಖಾರ್ವಿ ನಿಧನ: ಬಾಲ್ಯ ಸ್ನೇಹಿತರ ಕಂಬನಿ
ಹೊನ್ನಾವರ ಮಂಡಲದ (Honnavar BJP) ವಿವಿಧ ಹಂತಗಳ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಹೊನ್ನಾವರ ಮಂಡಲದ ಮುಖಂಡರು, ಕಾರ್ಯಕರ್ತರು, ಶಾಸಕ ದಿನಕರ ಕೆ ಶೆಟ್ಟಿ (MLA Dinakar Shetty) ನೇತೃತ್ವದಲ್ಲಿ ಕಾರವಾರ (Karwar) ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ (state government) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
identification/ ಗುರುತು ಪತ್ತೆಗೆ ಸಹಕರಿಸಿ: ಕುಟುಂಬದವರಿಗಾಗಿ ಶೋಧ
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಬೇಕು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಸಚಿವ ಬಿ ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. “ಭ್ರಷ್ಟಾಚಾರದ ವಿರುದ್ಧ ಹೋರಾಟ — ಜನರ ಪರ ನಮ್ಮ ಧ್ವನಿ” ಎಂಬ ಘೋಷಣೆಯೊಂದಿಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

