ಭಟ್ಕಳ ಡೈರಿ ವರದಿ 

ಭಟ್ಕಳ: ಕಲೆ, ಸಾಹಿತ್ಯ, ಸಂಗೀತ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಭಟ್ಕಳದ ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು ಬೆಂಗಳೂರು– ಉತ್ತರ ಕನ್ನಡ ಜಿಲ್ಲಾ ಘಟಕ ವತಿಯಿಂದ ಆಯೋಜಿಸಿದ್ದ ‘ಸಾಂಸ್ಕೃತಿಕ ವೈಭವ’ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಯಲ್ಲಾಪುರದ ಅಡಿಕೆ ಸಭಾಭವನದಲ್ಲಿ ಭಾನುವಾರ ನಡೆದ ಅದ್ಧೂರಿ ಸಮಾರಂಭದಲ್ಲಿ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ ಪ್ರಶಸ್ತಿ ಪ್ರದಾನ ಮಾಡಿದರು. ನಿನಾದ ಕಲ್ಚರಲ್ ಅಕಾಡೆಮಿಯ ಪರವಾಗಿ ಉಮೇಶ ಮುಂಡಳ್ಳಿ, ರೇಷ್ಮಾ ಉಮೇಶ, ನಿನಾದ ಹಾಗೂ ಉತ್ಥಾನ ಪ್ರಶಸ್ತಿ ಸ್ವೀಕರಿಸಿದರು.

ಮಕ್ಕಳ ಪ್ರತಿಭೆಗೆ ವೇದಿಕೆ :

ಕಲೆ, ಸಂಸ್ಕೃತಿ, ಸಾಹಿತ್ಯ ಹಾಗೂ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ನಿನಾದ ಕಲ್ಚರಲ್ ಅಕಾಡೆಮಿ ಹಲವು ವರ್ಷಗಳಿಂದ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಮಕ್ಕಳ ಪ್ರತಿಭಾ ಅನಾವರಣ, ಸಾಹಿತ್ಯ, ಸಂಗೀತ, ಕಲೆ ಹಾಗೂ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆ ಕಲ್ಪಿಸುವ ಮೂಲಕ ಸಂಸ್ಥೆ ಗಮನ ಸೆಳೆದಿದೆ. ನಿನಾದ ಕಲ್ಚರಲ್ ಅಕಾಡೆಮಿಗೆ ದೊರೆತಿರುವ ಈ ಗೌರವವು ಸಂಸ್ಥೆಯ ಕಲಾವಿದರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಹಿತೈಷಿಗಳಿಗೆ ಸಲ್ಲುವ ಗೌರವವಾಗಿದೆ.

ಇದನ್ನೂ ಓದಿ:

ಮುಂಡಳ್ಳಿಯಲ್ಲಿ ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು 

ಭಟ್ಕಳದಲ್ಲಿ ಕಳೆದೊಂದು ವಾರ: ಅಕ್ರಮ ಚಟುವಟಿಕೆಗಳಿಗೆ ಬ್ರೇಕ್, ಜನಸಮಸ್ಯೆಗಳಿಗೆ ಧ್ವನಿ

ವಿದ್ಯಾರ್ಥಿಗಳನ್ನು ತಿದ್ದುವ ಶಿಕ್ಷಕರ ಜವಾಬ್ದಾರಿ ಹೆಚ್ಚಾಗಿದೆ– ಮಧುಕೇಶ್ವರ ನಾಯ್ಕ