ಭಟ್ಕಳ ಡೈರಿ ವರದಿ

ಹೊನ್ನಾವರ: ತಾಲೂಕಿನ ಉಪ್ಪೋಣಿ ವಲಯಮಟ್ಟದ ೧೪ ವರ್ಷ ವಯೋಮಾನದ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ ಮಾಗೋಡದ ಶ್ರೀ ಶಾರದಾಂಬ ಪ್ರೌಢಶಾಲೆಯಲ್ಲಿ ನಡೆಯಿತು. ಕ್ರೀಡಾಕೂಟದ ಅಂಗವಾಗಿ ಕ್ರೀಡಾ ಧ್ವಜಾರೋಹಣ ನೆರವೇರಿಸಲಾಯಿತು.

ದೈಹಿಕ ಶಿಕ್ಷಕ ಸಾಲ್ವದೋರ ಲೋಪಿಸ್ ಮಾರ್ಗದರ್ಶನದಲ್ಲಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಸಂತೋಷ್ ಕುಮಾರ್ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಸಂಶಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಜೈವಂತ ಪೈ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಶಿಕ್ಷಕ ಸಂತೋಷ್ ಕುಮಾರ್, “ಕ್ರೀಡೆಯು ಮಾನವನ ಅವಿಭಾಜ್ಯ ಅಂಗ. ಕ್ರೀಡೆಯು ಸದೃಢ ದೇಹದಲ್ಲಿ ಸದೃಢ ಮನಸ್ಸನ್ನು ಬೆಳೆಸುತ್ತದೆ” ಎಂದು ಹೇಳಿದರು.

ಉತ್ತಮ ಶಿಕ್ಷಕರಿಗೆ ಸನ್ಮಾನ: ಕಾರ್ಯಕ್ರಮದ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾಮಟ್ಟದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಸಂಶಿ ಶಾಲೆಯ ದೈಹಿಕ ಶಿಕ್ಷಕ ಸಾಲ್ವದೋರ ಲೋಪಿಸ್ ಹಾಗೂ ಖಂಡೋಡಿ ಶಾಲೆಯ ಶಿಕ್ಷಕ ಲಕ್ಷ್ಮಣ ಪಟಗಾರ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಹೊನ್ನಾವರ ತಾಲೂಕು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಬಾಬು ನಾಯ್ಕ, ಮಾಗೋಡ ಸಿಆರ್‌ಪಿ ದಿನೇಶ ದೇಶಭಂಡಾರಿ, ಹೆರಂಗಡಿ ಸಿಆರ್‌ಪಿ ಸರಿತಾ ಬಾಂದೇಕರ, ಬಳ್ಕೂರು ಸಿಆರ್‌ಪಿ ಲಾವಣ್ಯ ಖಾರ್ವಿ** ಸೇರಿದಂತೆ ಅರುಣ ಫರ್ನಾಂಡಿಸ್, ಸುಭಾಷ್ ನಾಯ್ಕ, ರಮೇಶ ಮಲ್ಲಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಶಿಕ್ಷಕ ಗಣೇಶ ಕಾರ್ಯಕ್ರಮ ನಿರ್ವಹಿಸಿದರು.

ನಂತರ ವಿದ್ಯಾರ್ಥಿಗಳಿಗಾಗಿ ವಿವಿಧ ವೈಯಕ್ತಿಕ ಹಾಗೂ ಗುಂಪು ಆಟಗಳ ಸ್ಪರ್ಧೆಗಳು ನಡೆಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.

ಇದನ್ನೂ ಓದಿ:

ಮುರ್ಡೇಶ್ವರ ದೇವಸ್ಥಾನದಲ್ಲಿ ಭವ್ಯ ಬಿಲ್ವಾರ್ಚನೆ: ೨ ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನಸಂತರ್ಪಣೆ

ಜಾಲಿಯಲ್ಲಿ ಕಳೆಗಟ್ಟಿದ ‘ಕೃಷ್ಣ ಲೀಲಾ–೦೨’: ಪುಟಾಣಿಗಳ ಕೃಷ್ಣ ವೇಷಧಾರಿ ಸ್ಪರ್ಧೆ