ಭಟ್ಕಳ ಡೈರಿ ವರದಿ
ಭಟ್ಕಳ: ಅಂಕೋಲದ ಕ್ರಾಂತಿ ಮೈದಾನದಲ್ಲಿ ಸೆಪ್ಟೆಂಬರ್ ೨೯ರಂದು ನಡೆದ ೨೦೨೬-೨೭ನೇ ಸಾಲಿನ ೧೪ ವರ್ಷದ ವಯೋಮಿತಿಯ ಪ್ರಾಥಮಿಕ ಶಾಲಾ ವಿಭಾಗದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಭಟ್ಕಳ ತಾಲೂಕಿನ ಪಿಎಂ.ಶ್ರೀ ಕೆ.ಪಿ.ಎಸ್. ತೆರ್ನಮಕ್ಕಿ ಶಾಲೆಯ ವಿದ್ಯಾರ್ಥಿನಿ ಮಾನ್ವಿತ ಆರ್. ಆಚಾರಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಮಾನ್ವಿತ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದೆ. ಶಾಲೆಯ ಉಪ ಪ್ರಾಂಶುಪಾಲರು, ಹಿರಿಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ, ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಮಾನ್ವಿತ ಅವರನ್ನು ಅಭಿನಂದಿಸಿ, ರಾಜ್ಯಮಟ್ಟದ ಕ್ರೀಡಾಕೂಟದಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.
ಇದನ್ನೂ ಓದಿ:
ಮಹಾರಾಷ್ಟ್ರದಲ್ಲಿ ಜನಮನಸೆಳೆದ ಕನ್ನಡಿಗರ ‘ಗಣಪತಿ ಬಪ್ಪ ಭಜನಾಮೃತ’
ಹೊನ್ನೆಮಡಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಖೋ-ಖೋ ಸಾಧನೆ: ವಿಭಾಗ ಮಟ್ಟಕ್ಕೆ ೬ ಮಂದಿ ಆಯ್ಕೆ


