ಭಟ್ಕಳ ಡೈರಿ ವರದಿ

ಭಟ್ಕಳ: ಮಣ್ಕುಳಿಯ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಟಿ.ಟಿ. ವಾಹನ ಕಳವು ಪ್ರಕರಣದ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ಬಂಧಿಸುವಂತೆ ಆಗ್ರಹಿಸಿ ಮಿನಿ ಬಸ್ ವಾಹನ ಮಾಲಕರ ಹಾಗೂ ಚಾಲಕರ ಸಂಘದ ಪದಾಧಿಕಾರಿಗಳು ಐಪಿಎಸ್ ಅಧಿಕಾರಿ ರಾನು ಗುಪ್ತಾ ಅವರಿಗೆ ಮನವಿ ಸಲ್ಲಿಸಿದರು.

ಕಳೆದ ರಾತ್ರಿ ಮಣ್ಕುಳಿಯ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಟಿ.ಟಿ. ವಾಹನ ಕಳವಾಗಿತ್ತು. ಕಳವಾದ ವಾಹನ ಮಧ್ಯರಾತ್ರಿ ೨:೧೫ರ ಸುಮಾರಿಗೆ ಶಿರೂರು ಟೋಲ್‌ಗೇಟ್ ದಾಟಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಿಸಿಟಿವಿ ದೃಶ್ಯ ಸೇರಿದಂತೆ ಲಭ್ಯವಿರುವ ಮಾಹಿತಿಯನ್ನು ಆಧರಿಸಿ ತ್ವರಿತ ತನಿಖೆ ನಡೆಸಬೇಕು. ಕಳವಾದ ವಾಹನವನ್ನು ಶೀಘ್ರ ಪತ್ತೆಹಚ್ಚಿ ವಶಕ್ಕೆ ಪಡೆಯುವುದರ ಜೊತೆಗೆ, ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ವಾಹನ ಕಳವು ಪ್ರಕರಣದಿಂದ ಮಾಲಕರಿಗೆ ಗಮನಾರ್ಹ ಆರ್ಥಿಕ ನಷ್ಟ ಉಂಟಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದರು.

ಇದನ್ನೂ ಓದಿ:

ಬಿಪಿಎಲ್ ಕಾರ್ಡ್‌ದಾರರ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಆಗ್ರಹ

ಭಟ್ಕಳದ ಎಐಟಿಎಂ ವಿದ್ಯಾರ್ಥಿ ಪ್ರವೀಣ ರವಿ ಹರಿಜನಗೆ ಕರಾಟೆಯಲ್ಲಿ ಚಿನ್ನದ ಪದಕ