ಕಾರವಾರ : ಈ ಬಾರಿಯ ಲೋಕಸಭಾ ಚುನಾವಣೆಗೆ ಜಿಲ್ಲೆಯಲ್ಲಿ 1435 ಮತಗಟ್ಟೆಗಳ ಕರಡುಪಟ್ಟಿ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಹೆಚ್ಚುವರಿ ಮತಗಟ್ಟೆಗಳನ್ನು ಮಾಡುವ ಅವಶ್ಯಕತೆ ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
ಇದನ್ನೂ ಓದಿ : ನಾಗಮಾಸ್ತಿ ದೇವರ ವರ್ಧಂತ್ಯೋತ್ಸವ ನಾಳೆ
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲೋಕಸಭಾ ಚುನಾವಣೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ 1435, ಕಿತ್ತೂರು ಮತ್ತು ಖಾನಾಪುರ ಮತಕ್ಷೇತ್ರಗಳಲ್ಲಿ 542 ಸೇರಿದಂತೆ ಒಟ್ಟು 1977 ಮತಗಟ್ಟೆಗಳನ್ನು ಗುರುತಿಸಲಾಗಿದೆ. ಉತ್ತರ ಕನ್ನಡ ಕ್ಷೇತ್ರದಲ್ಲಿ ಒಟ್ಟು 16,22,857 ಮತದಾರರಿದ್ದಾರೆ. ಚುನಾವಣಾ ನೀತಿ ಸಂಹಿತೆ ಘೋಷಣೆಯಾದ ಕೂಡಲೇ ರಾಜಕೀಯ ಪಕ್ಷಗಳ ಸಭೆ ಕರೆದು ನಾಮಪತ್ರದ ಜೊತೆಗೆ ಸಲ್ಲಿಸಬೇಕಾದ ದಾಖಲಾತಿಗಳ ಬಗ್ಗೆ ಚುನಾವಣಾ ಆಯೋಗ ನೀಡುವ ನಿರ್ದೇಶನಗಳ ಕುರಿತು ಸಮಗ್ರ ಮಾಹಿತಿ ನೀಡಲಾಗುವುದು ಎಂದರು.
ಈ ವಿಡಿಯೋ ನೋಡಿ : ಪಾಳು ಬಿದ್ದ ಮನೆಗೆ ಬೆಂಕಿ https://www.facebook.com/share/v/taYcUW4FWWFsY5bu/?mibextid=oFDknk
ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಬೂತ್ ಲೆವೆಲ್ ಏಜೆಂಟರನ್ನು ನೇಮಕ ಮಾಡಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿ, ಚುನಾವಣಾ ಆಯೋಗ ಹೊರಡಿಸುವ ಎಲ್ಲಾ ನಿರ್ದೇಶನಗಳನ್ನು ತಮಗೆ ಕಾಲಕಾಲಕ್ಕೆ ತಿಳಿಸುವ ಮೂಲಕ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲಾ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಇದಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಅಗತ್ಯ ಸಹಕಾರ ನೀಡುವಂತೆ ತಿಳಿಸಿದರು.
ಈ ವಿಡಿಯೋ ನೋಡಿ : ಇಲೆಕ್ಟ್ರಿಕಲ್ ದ್ವಿಚಕ್ರ ವಾಹನಕ್ಕೆ ಬೆಂಕಿ https://www.facebook.com/share/v/Zuevj7qSsnVciK9K/?mibextid=oFDknk
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸಾಯಿ ಗಾಂವಕರ್, ಉಪಾಧ್ಯಕ್ಷ ಶಂಭು ಶೆಟ್ಟಿ, ಬಿ.ಜೆ.ಪಿ. ಕಾರ್ಯದರ್ಶಿ ಸಂದೇಶ್ ಶೇಟ್ ಉಪಸ್ಥಿತರಿದ್ದರು.