ಭಟ್ಕಳ ಡೈರಿ ವರದಿ
ಭಟ್ಕಳ: ‘ಸ್ವಚ್ಛತಾ ಹಿ ಸೇವಾ–೨೦೨೬’ ಅಭಿಯಾನದ ಅಂಗವಾಗಿ ಅ. ೨ರಂದು ಮುರುಡೇಶ್ವರ ರೈಲು ನಿಲ್ದಾಣದಲ್ಲಿ ಸ್ವಚ್ಛತಾ ಪ್ರತಿಜ್ಞೆ ಹಾಗೂ ಸ್ವಚ್ಛತಾ ಅಭಿಯಾನ ನಡೆಯಿತು. ಕೊಂಕಣ ರೈಲ್ವೆಯ ಮಡಗಾಂವ್ ವಿಭಾಗದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ದಿಲೀಪ್ ಡಿ. ಭಟ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ರೈಲ್ವೆ ಸಿಬ್ಬಂದಿ, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಬ್ರಹ್ಮಾವರದ ಸೇಂಟ್ ಮೇರೀಸ್ ಸಿರಿಯನ್ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಪಾಲ್ಗೊಂಡರು.
ನಿಲ್ದಾಣದ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡ ಅವರು, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಿದರು. ಸ್ವಚ್ಛತೆಯನ್ನು ಕಾಪಾಡುವಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂಬ ಸಂದೇಶವನ್ನು ಅಭಿಯಾನದ ಮೂಲಕ ನೀಡಲಾಯಿತು.
ಇದನ್ನೂ ಓದಿ :
ವೆಂಕಟಾಪುರದಲ್ಲಿ ರಸ್ತೆ ಕಾಮಗಾರಿ ಸ್ಥಗಿತಕ್ಕೆ ಆಗ್ರಹ: ಹಾಡಿ ಜಾಗ ಸಂರಕ್ಷಣೆಗೆ ಮನವಿ


