ಭಟ್ಕಳ ಡೈರಿ ವರದಿ

ಭಟ್ಕಳ: ತಾಲೂಕಿನ ಮಾವಿನಕಟ್ಟಾದಲ್ಲಿ ಪರವಾನಗಿ ಇಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಆರೋಪದಡಿ ಗೂಡಂಗಡಿ ವ್ಯಾಪಾರಿಯೊಬ್ಬರ ವಿರುದ್ಧ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾವಿನಕಟ್ಟಾದ ಮಣ್ಣಹೊಂಡ ನಿವಾಸಿ ಗಣಪತಿ ಬಾಬು ನಾಯ್ಕ (೪೫) ಪ್ರಕರಣದ ಆರೋಪಿಯಾಗಿದ್ದಾರೆ.

ಪೊಲೀಸರ ದೂರಿನ ಪ್ರಕಾರ, ಅಕ್ಟೋಬರ್ ೧೨ರಂದು ಸಂಜೆ ೭.೨೦ರ ಸುಮಾರಿಗೆ ಮಾವಿನಕಟ್ಟೆಯಲ್ಲಿರುವ ಅವರ ಗೂಡಂಗಡಿ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪಾಸ್ ಅಥವಾ ಪರವಾನಗಿ ಇಲ್ಲದೆ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಡಲಾಗಿತ್ತು ಎನ್ನಲಾಗಿದೆ. ಈ ವೇಳೆ ಪೊಲೀಸರು ದಾಳಿ ನಡೆಸಿ, ತಲಾ ₹೫೫ ಮೌಲ್ಯದ ೨೫ ಮದ್ಯದ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ ₹೧,೩೭೫ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮುರ್ಡೇಶ್ವರ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪಿಎಸ್‌ಐ ಹಣಮಂತ ಬಿರಾದಾರ ಅವರು ಕರ್ನಾಟಕ ಅಬಕಾರಿ ಕಾಯ್ದೆ–೧೯೬೫ರ ಅಡಿಯಲ್ಲಿ ಸರ್ಕಾರದ ಪರವಾಗಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ:

ಮುಂಡಳ್ಳಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತಿಗಾನ ಸುಧೆ: ಉಮೇಶ ಮುಂಡಳ್ಳಿ ಗಾಯನಕ್ಕೆ ಭಕ್ತರು ಮಂತ್ರಮುಗ್ಧ

ಶಿರಾಲಿ ಚೆಕ್‌ಪೋಸ್ಟ್ ಬಳಿ ಮೋಟಾರ್ ಸೈಕಲ್‌ಗೆ ಇನ್ಸುಲೇಟರ್ ವಾಹನ ಡಿಕ್ಕಿ: ಅಂಗನವಾಡಿ ಶಿಕ್ಷಕಿಗೆ ಗಾಯ