ಭಟ್ಕಳ ಡೈರಿ ವರದಿ

ಭಟ್ಕಳ: ನಗರದ ಶಿಫಾ ಕ್ರಾಸ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಟ್ಕಳದ ಕೆ.ಎಚ್.ಬಿ. ಕಾಲೋನಿಯ ಶಿಫಾ ಕ್ರಾಸ್ ನಿವಾಸಿ, ವ್ಯಾಪಾರಿಯಾಗಿರುವ ಮಹ್ಮದ್ ಫಹಮಾನ್ (೩೪) ಪ್ರಕರಣದ ಆರೋಪಿಯಾಗಿದ್ದಾರೆ.

ಪೊಲೀಸ್ ದೂರಿನ ಪ್ರಕಾರ, ಅಕ್ಟೋಬರ್ ೧೩ರಂದು ಸಂಜೆ ೭ ಗಂಟೆಗೆ ಶಿಫಾ ಕ್ರಾಸ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅಮಲಿನಲ್ಲಿದ್ದ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದರು. ನಂತರ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಭಟ್ಕಳ ಶಹರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ನವೀನ್ ಎಸ್. ನಾಯ್ಕ ಅವರು ಸರ್ಕಾರದ ಪರವಾಗಿ ದೂರು ನೀಡಿದ್ದಾರೆ.

ಇದನ್ನೂ ಓದಿ :

ಭಟ್ಕಳದಲ್ಲಿ ಮಳೆ ಕೊರತೆ: ಕಡವಿನಕಟ್ಟೆ ಅಣೆಕಟ್ಟಿಗೆ ಒಳಹರಿವು ಇಳಿಕೆ; ಕುಡಿಯುವ ನೀರು, ಕೃಷಿ, ಜಾನುವಾರುಗಳಿಗೆ ಆತಂಕ

ನವರಾತ್ರಿ ಹಬ್ಬಕ್ಕೆ ಬೆಂಗಳೂರು–ಕಾರವಾರ ಮಾರ್ಗದಲ್ಲಿ ವಿಶೇಷ ರೈಲು ಸಂಚಾರ