ಭಟ್ಕಳ ಡೈರಿ ವರದಿ
ಭಟ್ಕಳ: ಇಲ್ಲಿನ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿನಿಯರು ಕರ್ನಾಟಕ ವಿಶ್ವವಿದ್ಯಾಲಯದ ೨೦೨೫ರ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಕಾಲೇಜು ಹಾಗೂ ಭಟ್ಕಳಕ್ಕೆ ಹೆಮ್ಮೆ ತಂದಿದ್ದಾರೆ.
ಕಾಲೇಜಿನ ೨೦೨೨–೨೦೨೫ನೇ ಸಾಲಿನ ಬಿ.ಕಾಂ ವಿದ್ಯಾರ್ಥಿನಿ ಮಹಾಲಕ್ಷ್ಮಿ ಆರ್. ಕಾಮತ್ ಅವರು ಶೇ. ೯೫.೮೬ ಅಂಕಗಳೊಂದಿಗೆ ಕರ್ನಾಟಕ ವಿಶ್ವವಿದ್ಯಾಲಯದ ಬಿ.ಕಾಂ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಗಳಿಸಿದ್ದಾರೆ. ಇದೇ ಕಾಲೇಜಿನ ಬಿಬಿಎ ವಿಭಾಗದ ವಿದ್ಯಾರ್ಥಿನಿ ಶ್ರೀನಿಧಿ ಪಿ. ಪೈ ಅವರು ಶೇ. ೯೨.೮೧ ಅಂಕಗಳನ್ನು ಪಡೆದು ಬಿಬಿಎ ವಿಭಾಗದಲ್ಲಿ ಐದನೇ ರ್ಯಾಂಕ್ ಗಳಿಸಿದ್ದಾರೆ.
ವಿದ್ಯಾರ್ಥಿನಿಯರ ಈ ಶೈಕ್ಷಣಿಕ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ಪಾಲಕರು ಮತ್ತು ಸಹಪಾಠಿಗಳೂ ವಿದ್ಯಾರ್ಥಿನಿಯರ ಸಾಧನೆಯನ್ನು ಶ್ಲಾಘಿಸಿದ್ದಾರೆ.
ಇದನ್ನೂ ಓದಿ:
ಭಟ್ಕಳದಲ್ಲಿ ಮಳೆ ಕೊರತೆ: ಕಡವಿನಕಟ್ಟೆ ಅಣೆಕಟ್ಟಿಗೆ ಒಳಹರಿವು ಇಳಿಕೆ; ಕುಡಿಯುವ ನೀರು, ಕೃಷಿ, ಜಾನುವಾರುಗಳಿಗೆ ಆತಂಕ
ನವರಾತ್ರಿ ಹಬ್ಬಕ್ಕೆ ಬೆಂಗಳೂರು–ಕಾರವಾರ ಮಾರ್ಗದಲ್ಲಿ ವಿಶೇಷ ರೈಲು ಸಂಚಾರ




