ಭಟ್ಕಳ ಡೈರಿ ವರದಿ
ಭಟ್ಕಳ: ಮುರ್ಡೇಶ್ವರದ ಬಸ್ತಿಮಕ್ಕಿ ಕ್ರಾಸ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿರುವ ಆರೋಪದ ಮೇಲೆ ೨೬ ವರ್ಷದ ಯುವಕನ ವಿರುದ್ಧ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವ ಸಂಬಂಧ ಕಾನೂನು ಕ್ರಮಕ್ಕೆ ಮುಂದಾಗಲಾಗಿದೆ. ಮಾವಳ್ಳಿಯ ಮೊಹಮ್ಮದ್ ಅಬಾನ್ ತಂದೆ ಅಬ್ದುಲ್ಲಾ ಶೇಖ್ (೨೬) ಆರೋಪಿ ಎಂದು ಗುರುತಿಸಲಾಗಿದೆ.
ಘಟನೆ ಅಕ್ಟೋಬರ್ ೨೪ರಂದು ಸಂಜೆ ಸುಮಾರು ೬.೧೦ರ ವೇಳೆಗೆ ನಡೆದಿದ್ದು, ಗಾಂಜಾ ಸೇವನೆ ಮಾಡಿರುವ ಅನುಮಾನದ ಮೇರೆಗೆ ಮುರ್ಡೇಶ್ವರ ಪೊಲೀಸ್ ಠಾಣೆಯ ಪಿಎಸ್ಐ ಹಣಮಂತ ಬಿರಾದಾರ ಅವರು ಪಂಚರ ಸಮಕ್ಷಮ ಪೊಲೀಸ್ ಸಿಬ್ಬಂದಿಯೊಂದಿಗೆ ಆರೋಪಿಯನ್ನು ವಶಕ್ಕೆ ಪಡೆದಿದ್ದರು. ಬಳಿಕ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ವರದಿ ಪಡೆಯಲಾಗಿತ್ತು.
ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಆರೋಪಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಪಿಎಸ್ಐ ಹಣಮಂತ ಬಿರಾದಾರ ಅವರು ಸರ್ಕಾರದ ಪರವಾಗಿ ದೂರು ಸಲ್ಲಿಸಿದ್ದು, ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.
ಇದನ್ನೂ ಓದಿ :
ಭಟ್ಕಳದಲ್ಲಿ ಕಳೆದೊಂದು ವಾರ: ಹಸಿರು ಸಂಕಲ್ಪದಿಂದ ಧಾರ್ಮಿಕ-ಸಾಮಾಜಿಕ ಚಟುವಟಿಕೆಗಳವರೆಗೆ
ಭಗವದ್ಗೀತೆಯ ಜ್ಞಾನ ಬದುಕಿನ ಸವಾಲುಗಳಿಗೆ ದಾರಿ ತೋರಿಸುತ್ತದೆ: ರಾಜೇಶ ನಾಯಕ




