ಭಟ್ಕಳ ಡೈರಿ ವರದಿ
ಭಟ್ಕಳ: ನವೆಂಬರ್ ೧ರಂದು ಭಟ್ಕಳದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪಥಸಂಚಲನದ ಹಿನ್ನೆಲೆಯಲ್ಲಿ ಸಿದ್ಧತೆಗಳು ಚುರುಕುಗೊಂಡಿವೆ. ಕಾರ್ಯಕ್ರಮದ ಸುಗಮ ಆಯೋಜನೆ ಹಾಗೂ ಶಾಂತಿ, ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಭಟ್ಕಳ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು.
ಹಿಂದೂ ಸಂಘಟನೆಗಳ ಪ್ರಮುಖರೊಂದಿಗೆ ನಡೆದ ಸಭೆಯಲ್ಲಿ ಪಥಸಂಚಲನದ ಸಿದ್ಧತೆಗಳು, ಅಗತ್ಯ ಮೂಲಸೌಕರ್ಯ, ಭದ್ರತಾ ವ್ಯವಸ್ಥೆ ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯದ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಆರ್ಎಸ್ಎಸ್, ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣಾ ವೇದಿಕೆ ಹಾಗೂ ಬಜರಂಗದಳದ ಪ್ರಮುಖರು, ಬಿಜೆಪಿ ಭಟ್ಕಳ ಮಂಡಲ ಮತ್ತು ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು. ಇದರೊಂದಿಗೆ ಪೊಲೀಸ್ ಇಲಾಖೆ, ನಗರಸಭೆ, ಹೆಸ್ಕಾಂ, ಅಗ್ನಿಶಾಮಕ ದಳ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು, ಕಾರ್ಯಕ್ರಮದ ವೇಳೆ ಅಗತ್ಯವಿರುವ ವ್ಯವಸ್ಥೆಗಳ ಕುರಿತು ಸಮಾಲೋಚನೆ ನಡೆಸಿದರು.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ :
ಭಟ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಈಗಿನಿಂದಲೇ ಚುನಾವಣಾ ಲೆಕ್ಕಾಚಾರ! ಕಾಂಗ್ರೆಸ್ನಲ್ಲಿ ಹೊಸ ಆಕಾಂಕ್ಷಿ ಚರ್ಚೆ
ಡಾಕ್ಟರೇಟ್ ಪದವಿ ಪಡೆದ ಭಾರತಿ ನಾಯ್ಕಗೆ ಸ್ವಾಮಿ ವಿವೇಕಾನಂದ ಜನಸ್ಪಂದನ ಫೌಂಡೇಶನ್ನಿಂದ ಸನ್ಮಾನ



