ಭಟ್ಕಳ ಡೈರಿ ವರದಿ

ಭಟ್ಕಳ: ತಾಲೂಕಿನ ವೆಂಕಟಾಪುರದ ಜಾಗಟೆಬೈಲ್ ಮೈದಾನದ ಸಮೀಪ ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಸುಮಾರು ೪೫ ಸಾವಿರ ರೂ. ಮೌಲ್ಯದ ೨೩೩ ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತನನ್ನು ಮೊಹಮ್ಮದ್ ಪುರ್ಕಾನ್ (೩೩) ಎಂದು ಗುರುತಿಸಲಾಗಿದೆ. ಈತ ಭಟ್ಕಳದ ಮದೀನಾ ಕಾಲೋನಿಯ ಮೊಹಿದ್ದೀನ್ ಸ್ಟ್ರೀಟ್ ೨ನೇ ಕ್ರಾಸ್ ನಿವಾಸಿಯಾಗಿದ್ದು, ಪ್ರಸ್ತುತ ಬೆಂಗಳೂರಿನ ಕೃಷ್ಣರಾಜಪುರಂ ವ್ಯಾಪ್ತಿಯ ಸೀಗೆಹಳ್ಳಿಯ ಗ್ರೀನ್ ಫೀಲ್ಡ್ ಹಬ್ ಬಸ್ ನಿಲ್ದಾಣದ ಸಮೀಪ ವಾಸವಾಗಿ ಅಲ್ಲಿನ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ವೆಂಕಟಾಪುರದ ಜಾಗಟೆಬೈಲ್ ಮೈದಾನದ ಬಳಿ ಪರವಾನಗಿ ಇಲ್ಲದೆ ಕೈಚೀಲದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಪಿಎಸ್ಐ ಭರಮಪ್ಪ ಬೆಳಗಲಿ ಹಾಗೂ ಪೊಲೀಸ್ ತಂಡ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಆರೋಪಿಯನ್ನು ಬಂಧಿಸಿ, ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.

ಈ ಸಂಬಂಧ ಪಿಎಸ್ಐ ಭರಮಪ್ಪ ಬೆಳಗಲಿ ನೀಡಿದ ದೂರಿನ ಆಧಾರದಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಅಂಬರೀಷ್ ಕುಂಬಾರಿ, ಕಿರಣ ತಿಳಗಂಜಿ, ನಾಗರಾಜ ಹೋತ್ನಳ್ಳಿ, ಕಪಿಲ ತಳಕೇರಿ ಮತ್ತಿತರರು ಪಾಲ್ಗೊಂಡಿದ್ದರು.

ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ

ಇದನ್ನೂ ಓದಿ :

ಭಟ್ಕಳದ ಆಸರಕೇರಿಯಲ್ಲಿ ನ.೧ರಂದು ೨೯ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ

ಆರ್‌ಎಸ್‌ಎಸ್ ಪಥಸಂಚಲನದ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಸಿದ್ಧತೆ