ಭಟ್ಕಳ ಡೈರಿ ವರದಿ
ಭಟ್ಕಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಟ್ರಾನ್ಸ್ಪೋರ್ಟ್ ಲಾರಿ ಹಾಗೂ ಬೈಕ್ ನಡುವೆ ನಡೆದ ಈ ಅಪಘಾತದಲ್ಲಿ ಬೈಕ್ ಸವಾರ ಲಾರಿಯ ಅಡಿಯಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ.
ಭಟ್ಕಳ ರಾಷ್ಟ್ರೀಯ ಹೆದ್ದಾರಿಯ ಗುಳ್ಮಿ ಕ್ರಾಸ್ ಬಳಿ ಶನಿವಾರ ರಾತ್ರಿ ಸುಮಾರು ೮.೪೫ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಭಟ್ಕಳ ನಗರದ ಸಕಿನಾ ಕಂಪ್ಲೆಕ್ಸ್ನಲ್ಲಿ ಟೈಲರಿಂಗ್ ವೃತ್ತಿ ನಡೆಸುತ್ತಿದ್ದ ಕಟಿಂಗ್ ಮಾಸ್ಟರ್ ಖಾಸಿಂ ಸಾಬ್ ಎಂದು ಗುರುತಿಸಲಾಗಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಭಟ್ಕಳ ಶಹರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಟ್ರಾಫಿಕ್ ಜಾಮ್ ಉಂಟಾಗಿತ್ತು. ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಣ ಕ್ರಮ ಕೈಗೊಂಡು ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಭಟ್ಕಳದಲ್ಲಿ ೨೩೩ ಗ್ರಾಂ ಗಾಂಜಾ ಸಹಿತ ವ್ಯಕ್ತಿ ಬಂಧನ
ಭಟ್ಕಳದ ಆಸರಕೇರಿಯಲ್ಲಿ ನ.೧ರಂದು ೨೯ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ




