ಭಟ್ಕಳ ಡೈರಿ ವರದಿ

ಭಟ್ಕಳ: ವಿಜ್ಞಾನ ನಾಟಕದ ಮೂಲಕ ಜಲ ಸಂರಕ್ಷಣೆಯ ಮಹತ್ವ ಸಾರಿದ ಭಟ್ಕಳ ತಾಲೂಕಿನ ಕೆಪಿಎಸ್ ತೆರ್ನಮಕ್ಕಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಹೆಮ್ಮೆ ತಂದಿದ್ದಾರೆ.

ಅಕ್ಟೋಬರ್ ೫ರಂದು ಹೊನ್ನಾವರದ ರೋಸರಿ ಕಾನ್ವೆಂಟ್ ಸ್ಕೂಲ್ ಮತ್ತು ಪಿಯು ಕಾಲೇಜಿನಲ್ಲಿ ಡಯಟ್ ಕುಮಟಾ ಹಾಗೂ ರೋಸರಿ ಕಾನ್ವೆಂಟ್ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ನಾಟಕ ಸ್ಪರ್ಧೆ ಆಯೋಜಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ ಕೆಪಿಎಸ್ ತೆರ್ನಮಕ್ಕಿ ಶಾಲೆಯ ವಿದ್ಯಾರ್ಥಿಗಳು ಶ್ರೀಕಾಂತ ಕುಮಟಾ ಅವರ ರಚನೆ ಮತ್ತು ನಿರ್ದೇಶನದಲ್ಲಿ ಮೂಡಿಬಂದ ‘ಜಲವೇ ಜಗದ ಉಸಿರು’ ಎಂಬ ನಾಟಕವನ್ನು ಪ್ರದರ್ಶಿಸಿದರು. ಜಲ ಸಂರಕ್ಷಣೆಯ ಮಹತ್ವವನ್ನು ಸಾರುವ ಈ ನಾಟಕವು ತೀರ್ಪುಗಾರರ ಮೆಚ್ಚುಗೆ ಗಳಿಸಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿತು. ಇದೀಗ ವಿದ್ಯಾರ್ಥಿಗಳು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಉಪಪ್ರಾಂಶುಪಾಲರು, ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ವಿಭಾಗ ಮಟ್ಟದಲ್ಲಿಯೂ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲಿ ಎಂದು ಹಾರೈಸಿದ್ದಾರೆ.

ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ

ಇದನ್ನೂ ಓದಿ :

ಗ್ರಾಮ ಪಂಚಾಯತ್ ನೌಕರರ ವೇತನ ಕಡಿತಕ್ಕೆ ವಿರೋಧ: ಪರಿಷ್ಕೃತ ವೇತನ ಮುಂದುವರಿಸಲು ಸಂಘದ ಆಗ್ರಹ

ಮಣ್ಣಾಗುವ ಮುನ್ನವೇ ಕುಟುಂಬ ಸೇರಿದ ಅನಾಥ ಶವಗಳು