ಭಟ್ಕಳ ಡೈರಿ ವರದಿ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಕ್ರೀಡಾಪಟುಗಳಿಗೆ ಕಬಡ್ಡಿ ಕ್ರೀಡೆಯಲ್ಲಿ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ತಲಾ ಒಂದೊಂದು ಕಬಡ್ಡಿ ಮ್ಯಾಟ್ ಒದಗಿಸುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಸಲ್ಲಿಸಲಾಗಿದೆ. ಉತ್ತರ ಕನ್ನಡ ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ವತಿಯಿಂದ ಸಲ್ಲಿಸಲಾದ ಮನವಿಗೆ ಸಂಸದರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಕಬಡ್ಡಿ ಮ್ಯಾಟ್ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.
ಶುಕ್ರವಾರ ಭಟ್ಕಳ ರೈಲ್ವೆ ನಿಲ್ದಾಣದಲ್ಲಿ ಹವಾನಿಯಂತ್ರಿತ ವಿಶ್ರಾಂತಿ ಕೊಠಡಿಯ ಉದ್ಘಾಟನೆಗಾಗಿ ಆಗಮಿಸಿದ್ದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಶ್ರೀಧರ ನಾಯ್ಕ, ಅಸೋಸಿಯೇಷನ್ ಸದಸ್ಯರಾದ ಪ್ರಕಾಶ ನಾಯ್ಕ, ದಿನೇಶ ಗವಾಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕಬಡ್ಡಿ ಮ್ಯಾಟ್ ಒದಗಿಸುವುದರಿಂದ ಗ್ರಾಮೀಣ ಭಾಗದ ಕಬಡ್ಡಿ ಆಟಗಾರರಿಗೆ ಉತ್ತಮ ಅಭ್ಯಾಸ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯವಾದ ಸೌಲಭ್ಯ ದೊರೆಯುವ ನಿರೀಕ್ಷೆಯಿದೆ ಎಂದು ಶ್ರೀಧರ ನಾಯ್ಕ ತಿಳಿಸಿದ್ದಾರೆ.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ:
ಭಟ್ಕಳದ ವಾರದ ಚಿತ್ರಣ: ಅಭಿವೃದ್ಧಿಯ ನಿರೀಕ್ಷೆ, ಸಮಸ್ಯೆಗಳ ಸರಮಾಲೆ, ಪ್ರತಿಭೆಗಳ ಸಾಧನೆ!
ಭಟ್ಕಳ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ: ರಾತ್ರಿ ೮ರವರೆಗೆ ರಿಸರ್ವೇಶನ್ ಟಿಕೆಟ್ ಕೌಂಟರ್ ಸೇವೆ ವಿಸ್ತರಣೆ!




